Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
(ರಾಜ್ಯ ) ಜಿಲ್ಲೆ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೇಂದ್ರದ ಸ್ಪಂದನೆಗೆ ಅಭಿನಂದನೆ | ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯಕ್ಕೆ ಎಸ್.ಕೆ.ಬೆಳ್ಳುಬ್ಬಿ ಟೀಕೆ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕಬ್ಬು ಬೆಳೆಗಾರರ ಬೆಲೆ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ರೈತರ ಹೋರಾಟಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ತಮ್ಮ ಸ್ವಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಎರಡು ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿರುವುದು ಆಶಾದಾಯಕ ಬೆಳವಣಿಗೆ ಎಂದರು.
ಕಬ್ಬಿನ ಉತ್ಪಾದನಾ ವೆಚ್ಚ, ಕೂಲಿ ಕಾರ್ಮಿಕರ ಕೊರತೆ, ಸಾಗಣೆ ವೆಚ್ಚ ಹಾಗೂ ಕೃಷಿ ನಿರ್ವಹಣೆಯ ಖರ್ಚು ಹೆಚ್ಚಾಗುತ್ತಿರುವುದರಿಂದ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಬೆಲೆ ನಿಗದಿಗೆ ಪಾರದರ್ಶಕ ವ್ಯವಸ್ಥೆ ರೂಪಿಸಿ ರೈತರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.
ಅ.12ರಂದು ನವದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಕಬ್ಬಿನ ಬೆಲೆ, ಕನಿಷ್ಠ ಬೆಂಬಲ ಬೆಲೆ ನಿಗದಿ ಪ್ರಕ್ರಿಯೆ, ಎಥನಾಲ್ ಖರೀದಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ಚರ್ಚೆ ನಡೆದಿದೆ. ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸಿರುವುದು ರೈತರ ಹೋರಾಟಕ್ಕೆ ದೊರೆತ ಪ್ರಾಥಮಿಕ ಯಶಸ್ಸಾಗಿದೆ ಎಂದು ಅಭಿಪ್ರಾಯಪಟ್ಟರು.
ಸಮಿತಿಯು ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಲಿಸಿ, ರೈತರಿಗೆ ನ್ಯಾಯ ದೊರಕಿಸುವ ಶಿಫಾರಸುಗಳನ್ನು ಸಲ್ಲಿಸಬೇಕು. ಎಥನಾಲ್ ಉತ್ಪಾದನೆ ಮತ್ತು ಖರೀದಿ ವ್ಯವಸ್ಥೆಯಲ್ಲಿಯೂ ಬೆಳೆಗಾರರಿಗೆ ಅನುಕೂಲವಾಗುವ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದರು.
ಎರಡು ದಿನಗಳ ಹೆದ್ದಾರಿ ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಹೋರಾಟ ನಡೆಸಿರುವ ರೈತರ ಸಂಯಮ ಶ್ಲಾಘನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ರೈತರ ಹಕ್ಕಾಗಿದ್ದು, ಅವರ ಹೋರಾಟದ ಆಶಯವನ್ನು ಸರ್ಕಾರಗಳು ಗೌರವಿಸಬೇಕು ಎಂದರು.
ಕೇಂದ್ರ ಸರ್ಕಾರ ಸಮಿತಿ ರಚಿಸಿ ಪರಿಹಾರದ ಪ್ರಕ್ರಿಯೆಗೆ ಮುಂದಾಗಿರುವುದರಿಂದ ರೈತ ಸಂಘಟನೆಗಳು ಮಾತುಕತೆಗೆ ಅವಕಾಶ ನೀಡಬೇಕು. ಸರ್ಕಾರಕ್ಕೆ ಅಗತ್ಯ ಕಾಲಾವಕಾಶ ನೀಡಿ, ಸಮಾಲೋಚನೆಗಳ ಮೂಲಕ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಬೇಕು. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಕಬ್ಬಿನ ಬೆಲೆ ಸಮಸ್ಯೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಬೆಳ್ಳುಬ್ಬಿ, ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಅವರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರೈತರ ಸಂಕಷ್ಟವನ್ನು ನಿರ್ಲಕ್ಷಿಸುವುದು ಖಂಡನೀಯ. ಕೇಂದ್ರ ಸರ್ಕಾರ ಸಮಿತಿ ರಚಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವಾಗ ರಾಜ್ಯ ಸರ್ಕಾರವೂ ತನ್ನ ಜವಾಬ್ದಾರಿ ಅರಿತು ಕಬ್ಬಿಗೆ ಸೂಕ್ತ ಬೆಲೆ ದೊರಕಿಸಲು ಕ್ರಮ ಕೈಗೊಳ್ಳಬೇಕು. ರೈತರ ಸಮಸ್ಯೆಯನ್ನು ರಾಜಕೀಯ ದೃಷ್ಟಿಯಿಂದ ನೋಡುವ ಬದಲು ಅವರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿ ಸಮಿತಿ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿನ್ನಪ್ಪ ಗಿಡ್ಡಪ್ಪಗೊಳ, ಮಲ್ಲಪ್ಪ ಗಣಿ, ಪರಮಪ್ಪ ಬರಗಿ, ಅಶೋಕ ಗಿಡ್ಡಪ್ಪಗೊಳ ಸೇರಿದಂತೆ ರೈತ ಮುಖಂಡರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.