Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
(ರಾಜ್ಯ ) ಜಿಲ್ಲೆ

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಂಘಟಿತ ಹೋರಾಟ ಅಗತ್ಯ | ಬಸವನ ಬಾಗೇವಾಡಿಯಲ್ಲಿ ಬೆಳ್ಳುಬ್ಬಿ ಗೆಲುವಿಗೆ ದೇವಿಯಲ್ಲಿ ಪ್ರಾರ್ಥನೆ | ಕೊಲ್ಹಾರದಲ್ಲಿ ಪಾಂಡೆಗೆ ಅದ್ಧೂರಿ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಅಧಿಕಾರ, ಸ್ಥಾನಮಾನಕ್ಕಿಂತ ಜನರ ವಿಶ್ವಾಸವೇ ದೊಡ್ಡದು. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರು ರಾಜ್ಯಸಭೆಯಲ್ಲಿ ಜನರ ಧ್ವನಿಯಾಗುವ ಅವಕಾಶ ಕಲ್ಪಿಸಿದ್ದಾರೆ. ಈ ಜವಾಬ್ದಾರಿಯನ್ನು ಅಧಿಕಾರವೆಂದು ಭಾವಿಸದೆ, ಜನಸೇವೆಯೇ ಜನಾರ್ದನ ಸೇವೆ ಎಂಬ ಸಂಕಲ್ಪದೊಂದಿಗೆ ರಾಷ್ಟ್ರದ ಏಳಿಗೆಗೆ ಶ್ರಮಿಸುವುದಾಗಿ ನೂತನ ರಾಜ್ಯಸಭಾ ಸದಸ್ಯ ಗೋಪಿಕೃಷ್ಣ ಪಾಂಡೆ ಹೇಳಿದರು.
ಪಟ್ಟಣದ ಆದಿಶಕ್ತಿ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ನವರಾತ್ರಿ ದೇವಿ ಉತ್ಸವ ಮಂಟಪದಲ್ಲಿ ಬಸವನ ಬಾಗೇವಾಡಿ ಬಿಜೆಪಿ ಮಂಡಲ ಹಾಗೂ ಸಾರ್ವಜನಿಕರು ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ಪಕ್ಷದ ಸಂಘಟನೆಯೇ ಗೆಲುವಿನ ಅಡಿಪಾಯ. ಕಾರ್ಯಕರ್ತರ ಪರಿಶ್ರಮವಿಲ್ಲದೆ ಯಾವುದೇ ರಾಜಕೀಯ ಯಶಸ್ಸು ಸಾಧ್ಯವಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದರೊಂದಿಗೆ ಬಸವನ ಬಾಗೇವಾಡಿ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಕ್ಷೇತ್ರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಗೆಲುವು ಸಾಧಿಸಬೇಕೆಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಿದ್ದೇನೆ. ಈ ಸಂಕಲ್ಪ ಸಾಕಾರಗೊಳ್ಳಲು ಕಾರ್ಯಕರ್ತರು ಇಂದಿನಿಂದಲೇ ಸಂಘಟನೆಯಲ್ಲಿ ಸಕ್ರಿಯರಾಗಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಬೆಳ್ಳುಬ್ಬಿ ಅವರ ಪತ್ನಿ ಕಸ್ತೂರಿ ಬೆಳ್ಳುಬ್ಬಿ ಅವರ ಅಗಲಿಕೆ ನೋವು ತಂದಿದೆ. ದುಃಖದ ಸಂದರ್ಭದಲ್ಲಿ ಕುಟುಂಬಕ್ಕೆ ಸಾಂತ್ವನ ನೀಡಿದ ಸಾರ್ವಜನಿಕರ ಪ್ರೀತಿ, ವಿಶ್ವಾಸವೇ ಅವರಿಗೆ ದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಗೋಪಿಕೃಷ್ಣ ಪಾಂಡೆ ಅವರು ವಿಜಯಪುರ ಜಿಲ್ಲೆಯ ರಾಜಕೀಯ ಚಿತ್ರಣ, ಮತದಾರರ ಮನೋಭಾವ ಹಾಗೂ ಕಾರ್ಯಕರ್ತರ ಸಾಮರ್ಥ್ಯವನ್ನು ಸೂಕ್ಷ್ಮವಾಗಿ ಅರಿತಿರುವ ಸಂಘಟನಾ ಚತುರರು. ಮುಂಬರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವರ ಅನುಭವ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, 2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪಾಂಡೆ ಅವರ ಸಂಘಟನಾ ಶ್ರಮ ಮಹತ್ವದ್ದಾಗಿತ್ತು. ಅಂದು ಕರ್ನಾಟಕ ಉಸ್ತುವಾರಿಯ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅವರು, ಕಾರ್ಯಕರ್ತರ ನಾಡಿಮಿಡಿತ ಅರಿತು ಪಕ್ಷವನ್ನು ಸಂಘಟಿಸಿದ್ದರು. ವರ್ಷದಲ್ಲಿ ಒಂಬತ್ತು ತಿಂಗಳು ಪಕ್ಷ ಹಾಗೂ ರಾಷ್ಟ್ರಸೇವೆಗೆ ಮೀಸಲಿಡುವ ಅವರ ಬದ್ಧತೆ ಇಂದಿನ ಕಾರ್ಯಕರ್ತರಿಗೆ ಮಾದರಿಯಾಗಿದೆ ಎಂದು ಬಣ್ಣಿಸಿದರು.
ಯಲಗೂರ ಆಂಜನೇಯ ಹಾಗೂ ಅಂಜನಾದ್ರಿ ಹನುಮಂತನ ಅನುಗ್ರಹದಿಂದ ರಾಜ್ಯಸಭಾ ಸದಸ್ಯತ್ವದ ಗೌರವ ಪಡೆದಿರುವ ಪಾಂಡೆ ಅವರು ಹರಕೆ ತೀರಿಸಲು ಆಗಮಿಸಿದ್ದು ಸಂತಸದ ಸಂಗತಿ ಎಂದರು.
ಬೆಳ್ಳುಬ್ಬಿ ಕುಟುಂಬಕ್ಕೆ ಸಾಂತ್ವನ, ದೇವಿಗೆ ವಿಶೇಷ ಪೂಜೆ
ರಾಜ್ಯಸಭಾ ಸದಸ್ಯರಾಗಿ ಮೊದಲ ಬಾರಿಗೆ ಕೊಲ್ಹಾರಕ್ಕೆ ಆಗಮಿಸಿದ ಪಾಂಡೆ ಅವರಿಗೆ ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಾಂಪ್ರದಾಯಿಕ ರುಮಾಲು ಸುತ್ತಿ ಗೌರವ ಸಲ್ಲಿಸಿದರು.
ಇದಕ್ಕೂ ಮುನ್ನ ಬೆಳ್ಳುಬ್ಬಿ ಅವರ ನಿವಾಸಕ್ಕೆ ತೆರಳಿ ಕಸ್ತೂರಿ ಬೆಳ್ಳುಬ್ಬಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಪಟ್ಟಣದ ದ್ಯಾಮವ್ವ ದೇವಿ ಹಾಗೂ ಆದಿಶಕ್ತಿ ದೇವಿಯ ದರ್ಶನ ಪಡೆದು ಮಂಗಳಾರತಿ ಸೇವೆ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಬೀದರ್‌ನ ಶಿವಕುಮಾರ, ಟಿ.ಟಿ. ಹಗೇದಾಳ, ಶರಣು ಕಾಖಂಡಕಿ, ನಂದಬಸಪ್ಪ ಚೌಧರಿ, ಶಂಕರಗೌಡ ಪಾಟೀಲ, ಅಯ್ಯನಗೌಡ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಬೆಳ್ಳುಬ್ಬಿ ಗೆಲುವಿಗೆ ಪಾಂಡೆ ಸಂಕಲ್ಪ

ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನೆ ಬಲಪಡಿಸುವುದರ ಜತೆಗೆ 2028ರ ಚುನಾವಣೆಯಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಗೆಲುವು ಸಾಧಿಸಬೇಕೆಂದು ರಾಜ್ಯಸಭಾ ಸದಸ್ಯ ಗೋಪಿಕೃಷ್ಣ ಪಾಂಡೆ ಬಹಿರಂಗವಾಗಿ ಆಶಯ ವ್ಯಕ್ತಪಡಿಸಿರುವುದು ಸಮಾರಂಭದ ಪ್ರಮುಖ ರಾಜಕೀಯ ಸಂದೇಶವಾಗಿ ಹೊರಹೊಮ್ಮಿತು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೂ ಮುನ್ನ ಕಾರ್ಯಕರ್ತರಿಗೆ ಸಂಘಟನೆಯ ಮಂತ್ರ ನೀಡಿದ ಅವರು, ಪಕ್ಷದ ಗೆಲುವಿಗೆ ಒಗ್ಗಟ್ಟಿನ ಪರಿಶ್ರಮ ಅಗತ್ಯವೆಂದು ಪ್ರತಿಪಾದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.