Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
ವಿಶೇಷ ಲೇಖನ

371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಸತ್ತಿನಲ್ಲಿ ಪ್ರಸ್ತಾಪಿಸಿ, ಪ್ರಧಾನಿಯ ಗಮನಕ್ಕೆ ತರಲು ರಾಜ್ಯಸಭಾ ಸದಸ್ಯ ಗೋಪಿಕೃಷ್ಣ ಪಾಂಡೆಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಸ್ಥಾನಮಾನ ಕಲ್ಪಿಸಿ, ವಿಜಯಪುರ ಜಿಲ್ಲೆಯನ್ನು ಮಾತ್ರ ಅದರ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಜಿಲ್ಲೆಯ ಲಕ್ಷಾಂತರ ಜನರಿಗೆ ಮಾಡಿದ ಅನ್ಯಾಯವಾಗಿದೆ. ಈ ತಾರತಮ್ಯಕ್ಕೆ ಅಂತ್ಯ ಹಾಡಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣವಾಗಿ 371(ಜೆ) ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಪಟ್ಟಣದಲ್ಲಿ ನೂತನ ರಾಜ್ಯಸಭಾ ಸದಸ್ಯ ಗೋಪಿಕೃಷ್ಣ ಪಾಂಡೆ ಅವರಿಗೆ ಹೋರಾಟ ಸಮಿತಿ ಮುಖಂಡ ಅನೀಲ ಇಕ್ಕಡೆ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಒತ್ತಾಯಿಸಲಾಯಿತು.
‘ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ದೊರಕಿರುವ ೩೭೧ಜೆ ಮೀಸಲಾತಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ವಿಶೇಷ ಮೀಸಲಾತಿ, ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಆದ್ಯತೆ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವಿಶೇಷ ಅನುದಾನ ದೊರೆಯುತ್ತಿದೆ. ಆದರೆ, 25 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ವಿಜಯಪುರ ಜಿಲ್ಲೆಯ ಜನತೆ ಇಂತಹ ಅವಕಾಶಗಳಿಂದ ವಂಚಿತರಾಗಿರುವುದು ಸರಿಯಲ್ಲ ಎಂದು ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ 371(ಜೆ) ವಿಶೇಷ ಸ್ಥಾನಮಾನ ಅಗತ್ಯವಾಗಿದೆ. ಇದು ಕೇವಲ ಮೀಸಲಾತಿಯ ಬೇಡಿಕೆಯಲ್ಲ, ಜಿಲ್ಲೆಯ ಯುವಜನರ ಭವಿಷ್ಯ ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ನ್ಯಾಯಯುತ ಹೋರಾಟವಾಗಿದೆ ಎಂದು ಪ್ರತಿಪಾದಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ಈ ವಿಷಯ ತಂದು, ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಕ್ರಮ ವಹಿಸಬೇಕು. ಸಂವಿಧಾನದ 371(ಜೆ) ವಿಧಿಗೆ ಸೂಕ್ತ ತಿದ್ದುಪಡಿ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಮುಂಬರುವ ಸಂಸತ್ ಅಧಿವೇಶನದಲ್ಲಿ ವಿಜಯಪುರ ಜಿಲ್ಲೆಯ ಬೇಡಿಕೆಯನ್ನು ಪ್ರಸ್ತಾಪಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ರಾಜ್ಯಸಭಾ ಸದಸ್ಯ ಗೋಪಿಕೃಷ್ಣ ಪಾಂಡೆ, ವಿಜಯಪುರ ಜಿಲ್ಲೆಯ ಬೇಡಿಕೆಯನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತಂದು, ಜಿಲ್ಲೆಯ ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಸೇರಿದಂತೆ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.