Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
(ರಾಜ್ಯ ) ಜಿಲ್ಲೆ

ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬರಡೋಲದಲ್ಲಿ ಪ್ರಜಾ ಸೇವಾ ಅಭಿಯಾನಕ್ಕೆ ಅವ್ಯವಸ್ಥೆಯ ಅಡ್ಡಿ | ಜನರ ಅಹವಾಲು ಕೇಳಲು ವ್ಯವಸ್ಥೆಯೇ ಇಲ್ಲ | ಕೇವಲ 51 ಅಹವಾಲು ಸ್ವಿಕಾರ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಎಚ್ಚರಿಕೆ ನೀಡಿದರು.
ತಾಲೂಕಿನ ಬರಡೋಲ ಗ್ರಾಮದಲ್ಲಿ ಆಯೋಜಿಸಿದ್ದ ‘ಪ್ರಜಾ ಸೇವಾ ಅಭಿಯಾನ’ದ ಜನಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಮುಂದಿನ 2027ರ ಆಗಸ್ಟ್ ವರೆಗೆ ಮಳೆಯ ಕೊರತೆ ಎದುರಾಗುವ ಸಾಧ್ಯತೆಯಿದೆ ಎಂದು ವಿಜ್ಞಾನಿಗಳು ಹೇಳಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಕಡೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಇ ಸ್ವತ್ತಿನ ಉತಾರಿಗಳ ಕುರಿತು ಪಿಡಿಓ ಅವರಿಂದ ಲಿಖಿತ ಮಾಹಿತಿ ಪಡೆಯಿರಿ ಕೆಲಸ ಮಾಡದ ಪಿಡಿಓ ಅದಿಕಾರಿಗಳನ್ನು ಕೆಲಸದಿಂದಲೆ ತೆಗೆದುಹಾಕುತ್ತೆನೆ ಎಂದು ವಿಠ್ಠಲ ಕಟಕಧೋಂಡವರು ನಿರ್ಲಕ್ಷ ತೋರುವ ಅಧಿಕಾರಿಗಳಿಗೆ ಕಡಕ್ ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರವಿದಾಸ ಜಾಧವ, ತಹಶೀಲದಾರ ಸಂಜಯ ಇಂಗಳೆ,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ ರಾಠೋಡ, ದಾನಮ್ಮಗೌಡತಿ ಪಾಟೀಲ,ಬರಡೋಲ ಗ್ರಾ.ಪಂ.ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಜನರ ಅಹವಾಲು ಆಲಿಸಲು ಸೂಕ್ತ ವ್ಯವಸ್ಥೆಯೇ ಇರಲಿಲ್ಲ!

‘ಮನೆ ಬಾಗಿಲಿಗೆ ಬಂತು ಸರ್ಕಾರ, ಸಹಕಾರ ಇರಲಿ’ ಎಂಬ ಧ್ಯೇಯದೊಂದಿಗೆ ಆಯೋಜಿಸಿರುವ ಪ್ರಜಾ ಸೇವಾ ಅಭಿಯಾನದ ಉದ್ದೇಶವೇ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ಒದಗಿಸುವುದಾಗಿದೆ. ಆದರೆ ಬರಡೋಲದಲ್ಲಿ ನಡೆದ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಕುರಿತು ಪೂರ್ವಭಾವಿ ಮಾಹಿತಿ ಸಮರ್ಪಕವಾಗಿ ನೀಡಿರಲಿಲ್ಲ. ಸೂಕ್ತ ಸ್ಥಳದಲ್ಲಿ ಸಭೆ ಆಯೋಜಿಸದಿರುವುದು, ಕಳಪೆ ಧ್ವನಿವರ್ಧಕ ವ್ಯವಸ್ಥೆಯಿಂದಾಗಿ ಸಾರ್ವಜನಿಕರ ಅಹವಾಲುಗಳು ಅಧಿಕಾರಿಗಳಿಗೆ ಕೇಳಿಸದಿರುವುದು ಹಾಗೂ ಅಧಿಕಾರಿಗಳ ಉತ್ತರಗಳು ಜನರಿಗೆ ತಲುಪದಿರುವುದು ಗೊಂದಲಕ್ಕೆ ಕಾರಣವಾಯಿತು. ಸಭೆಯಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವೇ ಸಿಗಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಮತ್ತೊಮ್ಮೆ ವ್ಯವಸ್ಥಿತವಾಗಿ ಆಯೋಜಿಸಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಶಾಸಕ ವಿಠ್ಠಲ ಕಟಕಧೋಂಡ ಅವರು ಅಕ್ಟೋಬರ್ 24ರಂದು ಬರಡೋಲ ಗ್ರಾಮದಲ್ಲೇ ಪ್ರಜಾ ಸೇವಾ ಅಭಿಯಾನವನ್ನು ಪುನಃ ಆಯೋಜಿಸಲಾಗುವುದು ಎಂದು ಘೋಷಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.