ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಜಗದ್ದುರು ಶ್ರೀ ಮಧ್ವಾಚಾರ್ಯರ ಜಯಂತಿ ದಿನಾಚರಣೆ ಕಾರ್ಯಕ್ರಮ ಅ.೨೧ರ ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡಿಯಲಿದೆ.
ಅಂದು ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಂಡಿತ ಮಧ್ವಾಚಾರ್ಯ ಮೊಕಾಶಿ ಅವರು ಉಪನ್ಯಾಸ ನೀಡಲಿದ್ದಾರೆ ಹಾಗೂ ಶ್ರೀಮತಿ ವಿಶಾಲ ಕಟ್ಟಿ ಅವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಲ್ಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
