ಇಂಡಿಯ ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆ ನಿಧನ ಪ್ರಕರಣ
ವಿಜಯಪುರ: ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನ.೦೧ ರಂದು ನಿಧನ ಹೊಂದಿದ ಮಹಿಳೆ ಸಾವಿನ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಇಂಡಿ ಆಸ್ಪತ್ರೆಯಲ್ಲಿ ಡಯಾಲಸಿಸ್ ಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿದ್ದ ೩೫ ವರ್ಷ ವಯಸ್ಸಿನ ಶ್ರೀಮತಿ ಬಿಸ್ಮಿಲ್ಲಾ ಸೈಪನಸಾಬ ನದಾಫ್ ಸಾವಿನ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರ ನೇತೃತ್ವದಲ್ಲಿ, ಜಿಲ್ಲಾ ಶಸ್ತ್ರ ಚಿಕಿತ್ಸಕ, ನೆಪ್ರೋಲಾಜಿಸ್ಟ್ ಫಿಜಿಶಿಯನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿ ಅವರನ್ನೊಳಗೊಂಡ ತಂಡವನ್ನು ರಚಿಸಿದ್ದು, ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.