ಉದಯರಶ್ಮಿ ದಿನಪತ್ರಿಕೆ
ಅಥಣಿ: ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದಿರುವುದು ಹಾಗೂ ಮಾಹಿತಿ ಆಯೋಗದ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ್ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 5,000 ದಂಡ ವಿಧಿಸಿದೆ ಎಂದು ಅರ್ಜಿದಾರ ಅಜೀತ ಎಸ್. ಕಾಂಬಳೆ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಆಯೋಗವು ಮಾಹಿತಿ ಹಕ್ಕು ಕಾಯ್ದೆ–2005ರ ಕಲಂ 20(1)ರ ಅಡಿಯಲ್ಲಿ ದಂಡ ವಿಧಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಿದರು. ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರೂ ನಿಗದಿತ ಅವಧಿಯಲ್ಲಿ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಬೇಕಾಯಿತು ಎಂದು ಹೇಳಿದರು.

