ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ | ದಿಂಡವಾರದ ತೊಗರಿ ಬೆಳೆ ಮಧ್ಯದಲ್ಲಿ ಬೆಳೆದ ಗಾಂಜಾ ಗಿಡಗಳು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರದ ಹೊಲವೊಂದರಲ್ಲಿ ಬೆಳೆಯಲಾಗಿದ್ದ ೧ ಕೋಟಿ ರೂ.ಗೂ ಅಧಿಕ ಮೌಲ್ಯದ ೨೦೦ ಕೆಜಿಗೂ ಅಧೀಕ ಗಾಂಜಾ ಜಪ್ತು ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಶಂಕರ್ ಶರಣಪ್ಪ ಜೀರ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ ಅದರ ಮಧ್ಯದಲ್ಲಿ ೫೦೦ ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ೫೦೦ ಕ್ಕಿಂತಲೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆಸಿದ್ದು ಕಂಡು ಬಂದಿದ್ದು, ೧.೧ ಕೋಟಿ ರೂ. ಮೌಲ್ಯದ ಗಾಂಜಾ ಜಪ್ತು ಮಾಡಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷö್ಮಣ ನಿಂಬರಗಿ,
ಎನ್‌ಡಿಪಿಎಸ್ ಕಾಯ್ದೆ ನಿಯಮಗಳ ಪ್ರಕಾರ ದಾಳಿ ಪ್ರಕ್ರಿಯೆ ಕೈಕೊಂಡು ಆರೋಪಿತನಿಂದ ಈ ಕೆಳಗಿನ ಮೌಲ್ಯದ ಅಕ್ರಮ ಗಾಂಜಾ' ಬೆಳೆ ಜಪ್ತು ಮಾಡಿಕೊಳ್ಳಲಾಗಿದೆ.ದಿಂಡವಾರ’ ಗ್ರಾಮದಲ್ಲಿ ಗಾಂಜಾ ಬೆಳೆದಿರುವ ಮಾಹಿತಿ ಬೀಟ್ ಪೊಲೀಸ್ ಸಿಬ್ಬಂದಿಗೆ ಸ್ವೀಕೃತವಾಗಿತ್ತು, ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.
ಈ ಪ್ರಕರಣವನ್ನು ಬೇಧಿಸುವ ನಿಟ್ಟಿನಲ್ಲಿ ಬಸವನ ಬಾಗೇವಾಡಿ ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ, ಗುರುಶಾಂತ ದಾಶ್ಯಾಳ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿದ್ದು, ಈ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿ ಬಹುಮಾನವನ್ನು ಘೋಷಿಸಲಾಗಿದೆ ಎಂದರು.

ಸಪ್ಲೈ ಚೈನ್‌ಗೆ ಕತ್ತರಿ
ಗಾಂಜಾ ಬಗ್ಗೆ ಗೌಪ್ಯ ಮಾಹಿತಿ ನೀಡಿ’
ಮಾದಕ ದ್ರವ್ಯಗಳ ಮಾರಾಟ ಜಾಲವನ್ನೇ ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಂಭೀರವಾದ ಹೆಜ್ಜೆ ಇರಿಸುತ್ತದೆ, ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೀಟ್ ಮಟ್ಟದಲ್ಲಿಯೂ ಬೀಟ್ ಸಿಬ್ಬಂದಿಗಳ ಮುಖಾಂತರ ಮಾದಕ ದ್ರವ್ಯಗಳ ತಯಾರಿಕೆ, ಮಾರಾಟ ಹಾಗೂ ಬಳಕೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯ ಬಗ್ಗೆ ಸಾರ್ವಜನಿಕರ ಬಳಿ ಮಾಹಿತಿ ಇದ್ದರೆ ಅದನ್ನು ಇಲಾಖೆಗೆ ಒದಗಿಸಬೇಕು, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇರಿಸಲಾಗುವುದು, ಯೋಗ್ಯ ಬಹುಮಾನ ಸಹ ಇಲಾಖೆ ನೀಡಲಿದೆ ಎಂದು ಎಸ್.ಪಿ. ಲಕ್ಷ್ಮಣ ನಿಂಬರಗಿ ತಿಳಿಸಿದರು.

