ವಿಜಯಪುರ: ಮಹಾರಾಷ್ಟ್ರತ್ ಜತ್ತ ತಾಲೂಕಿನ ಹುಲಜಂತಿ ಗ್ರಾಮದಲ್ಲಿ ನವೆಂಬರ್ ೯ ರಿಂದ ೧೫ರವರೆಗೆ ಜರುಗುವ ಶ್ರೀ ಮಾಳಿಂಗರಾಯ ದೇವರ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಚಡಚಣ, ಸಿಂದಗಿ, ಮುದ್ದೇಬಿಹಾಳ, ತಾಳಿಕೊಟೆ ಹಾಗೂ ಬಸವನಬಾಗೇವಾಡಿ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ಮೊ: ೭೭೬೦೯೯೨೨೫೨, ಘಟಕ ವ್ಯವಸ್ಥಾಪಕರು ವಿಜಯಪುರ-೧: ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂ: ೦೮೩೫೨-೨೫೧೩೪೪ ಹಾಗೂ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
