ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದಲ್ಲಿ ಬೀಕರ ಬರಗಾಲವಿದ್ದು, ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಬರಗಾಲ ಎದುರಾಗಿರುವುದರಿಂದ ರೈತರ ಸಂಕಷ್ಟದಲ್ಲಿರುವುದನ್ನು ಗಮನದಲ್ಲಿಟ್ಟುಕೊಂಡು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಸಿಂದಗಿ ರಸ್ತೆಯ ನಿವಾಸದಲ್ಲಿ ಅಕ್ಟೋಬರ್ 22 ರಂದು ಯಾವುದೇ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದಿಲ್ಲ. ರೈತರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಸಹಕರಿಸಬೇಕು ಎಂದು ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

