ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪ್ರತಿ ವರ್ಷದಂತೆ ಈ ವರ್ಷವು ವಿಜಯದಶಮಿ ಅಂಗವಾಗಿ ಮತಕ್ಷೇತ್ರದ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವರ ಸಾರ್ವಜನಿಕ ಸೌಹಾರ್ದ ಬನ್ನಿ ವಿನಿಮಯ ಕಾರ್ಯಕ್ರಮ ದಿ: ೨೨ ರಂದು ಗುರುವಾರ ಜರುಗಲಿದೆ.
ವಿಜಯಪುರ ನಗರದ ಬಾಗಲಕೋಟ ರಸ್ತೆಯಲ್ಲಿನ ಬಸವನಗರದ ಸ್ವಗೃಹದಲ್ಲಿ ಜರಗುವ ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಹಿತೈಷಿಗಳು, ಕ್ಷೇತ್ರದ ಹಿರಿಯರು,ಧುರೀಣರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

