Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್–ಸಾರ್ವಜನಿಕರ ಸಹಭಾಗಿತ್ವದಿಂದ ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ
(ರಾಜ್ಯ ) ಜಿಲ್ಲೆ

ಪೊಲೀಸ್–ಸಾರ್ವಜನಿಕರ ಸಹಭಾಗಿತ್ವದಿಂದ ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ | ಹುತಾತ್ಮರಿಗೆ ಗೌರವ ನಮನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪೊಲೀಸ್ ಸಿಬ್ಬಂದಿಯ ನಿಸ್ವಾರ್ಥ ಸೇವೆ ಮತ್ತು ತ್ಯಾಗ ಸಮಾಜದ ಸುರಕ್ಷತೆಗೆ ಭದ್ರ ಬುನಾದಿಯಾಗಿದ್ದು, ಶಾಂತಿಯುತ ಸಮಾಜ ನಿರ್ಮಾಣಕ್ಕೆ ಪೊಲೀಸ್–ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ್ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶಾದ್ಯಂತ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ೧೫೪ ಪೊಲೀಸ್ ಸಿಬ್ಬಂದಿಯ ಬಲಿದಾನವನ್ನು ಸ್ಮರಿಸಲಾಯಿತು.
ಭಾರತೀಯ ಸಂವಿಧಾನದ ವಿಧಿ ೫೧ಎ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯಗಳನ್ನು ವಿವರಿಸಲಾಗಿದೆ. ಹಕ್ಕುಗಳ ಬಗ್ಗೆ ಅರಿವು ಹೊಂದಿರುವಂತೆಯೇ ಕರ್ತವ್ಯಗಳ ಬಗ್ಗೆಯೂ ಜಾಗೃತಿ ಹೊಂದುವುದು ಅಗತ್ಯ. ಸಂವಿಧಾನದ ಆಶಯಗಳನ್ನು ಗೌರವಿಸುವುದು, ಕಾನೂನು ಪಾಲಿಸುವುದು ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ನಾಗರಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಆನಂದ್.ಕೆ. ಮಾತನಾಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿ ಇತರ ಇಲಾಖೆಗಳಿಂದ ಭಿನ್ನವಾಗಿದೆ. ಸಮಸ್ಯೆಗಳು ಎದುರಾದಾಗ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವುದು ಪೊಲೀಸರ ಕರ್ತವ್ಯ. ಪೊಲೀಸ್ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ದೈನಂದಿನ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಪರಾಧ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವುದರ ಜೊತೆಗೆ ಅವುಗಳನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದೂ ಪೊಲೀಸರ ಪ್ರಮುಖ ಜವಾಬ್ದಾರಿಯಾಗಿದೆ. ರಾತ್ರಿ ಗಸ್ತು, ಸಂಚಾರ ನಿಯಂತ್ರಣ ಹಾಗೂ ನಿರಂತರ ನಿಗಾ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ಸಮಾಜದಲ್ಲಿ ಉಂಟಾಗುವ ಸಂಘರ್ಷಗಳು ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಪೊಲೀಸ್ ಸಿಬ್ಬಂದಿ ಕರ್ತವ್ಯದ ನಿಮಿತ್ತ ಹಬ್ಬ-ಹರಿದಿನಗಳು ಹಾಗೂ ಕುಟುಂಬದ ವಿಶೇಷ ಸಂದರ್ಭಗಳಲ್ಲಿಯೂ ಕುಟುಂಬದಿಂದ ದೂರವಿರಬೇಕಾಗುತ್ತದೆ. ಅವರ ಸೇವೆಗೆ ಬೆಂಬಲವಾಗಿ ನಿಲ್ಲುವ ಕುಟುಂಬದವರ ತ್ಯಾಗ ಮತ್ತು ಕೊಡುಗೆಯನ್ನೂ ಸಮಾಜ ಗೌರವಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ೧೯೫೯ರ ಅಕ್ಟೋಬರ್ ೨೧ರಂದು ಭಾರತ–ಚೀನಾ ಗಡಿ ಪ್ರದೇಶದ ಲಡಾಖ್‌ನ ಹಾಟ್ ಸ್ಪ್ರಿಂಗ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ವೀರರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ ೨೧ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ. ದೇಶದ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಪೊಲೀಸ್ ಸಿಬ್ಬಂದಿಯ ಶೌರ್ಯ, ತ್ಯಾಗ ಹಾಗೂ ಕರ್ತವ್ಯನಿಷ್ಠೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಅವರ ಬಲಿದಾನವನ್ನು ಸದಾ ಸ್ಮರಿಸಿ ಗೌರವಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಜೂಫಿಶಾನ ಹಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಕುಟುಂಬಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸ್ ಗೌರವ ನಮನ ಸಲ್ಲಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್

ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಕುರಿತು ಅರಿಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
    In (ರಾಜ್ಯ ) ಜಿಲ್ಲೆ
  • ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್
    In (ರಾಜ್ಯ ) ಜಿಲ್ಲೆ
  • ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಕುರಿತು ಅರಿಯಬೇಕು
    In (ರಾಜ್ಯ ) ಜಿಲ್ಲೆ
  • ಕೆರೆಗಳ ಭರ್ತಿಗೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೌಹಾರ್ದತೆ, ಸಂಬಂಧ ಬೆಸೆವ ಬನ್ನಿ ವಿನಿಮಯ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅನುವಾದದಿಂದಲೇ ಕನ್ನಡ ಸಾಹಿತ್ಯ-ಸಂಸ್ಕೃತಿ ಜಗತ್ತಿಗೆ ಪರಿಚಯ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಪಾಟೀಲ‌ ಬನ್ನಿ ವಿನಿಮಯ
    In (ರಾಜ್ಯ ) ಜಿಲ್ಲೆ
  • ಕೆನಾಲ್ ಕೊನೆವರೆಗೆ ನೀರು ಹರಿಸಲು ಪೊಲೀಸರ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.