Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನುವಾದದಿಂದಲೇ ಕನ್ನಡ ಸಾಹಿತ್ಯ-ಸಂಸ್ಕೃತಿ ಜಗತ್ತಿಗೆ ಪರಿಚಯ
(ರಾಜ್ಯ ) ಜಿಲ್ಲೆ

ಅನುವಾದದಿಂದಲೇ ಕನ್ನಡ ಸಾಹಿತ್ಯ-ಸಂಸ್ಕೃತಿ ಜಗತ್ತಿಗೆ ಪರಿಚಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ ಅಭಿಮತ | ಗೌರವ ಪ್ರಶಸ್ತಿ ಪ್ರದಾನ | ಪುಸ್ತಕ ಬಹುಮಾನ ವಿತರಣೆ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಸಾಹಿತ್ಯ, ಭಾಷೆ ಹಾಗೂ ಸಂಸ್ಕೃತಿಯನ್ನು ದೇಶ-ವಿದೇಶಗಳಲ್ಲಿ ಪರಿಚಯಿಸುವಲ್ಲಿ ಅನುವಾದ ಕಾರ್ಯ ಪ್ರಮುಖ ಪಾತ್ರ ವಹಿಸಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ೨೦೨೬ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ೨೦೨೫ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವಿಧ ಭಾಷೆಗಳಲ್ಲಿನ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ಕನ್ನಡಕ್ಕೆ ಹಾಗೂ ಕನ್ನಡದ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದಿಸುವ ಮೂಲಕ ಭಾಷೆಗಳ ನಡುವಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಬಲಪಡಿಸಬಹುದಾಗಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ಡಾ. ಡಿ.ಎಸ್. ಚೌಗಲೆ ಅಧ್ಯಕ್ಷತೆ ವಹಿಸಿ, ವಂದನಾ ನುಡಿ ನುಡಿದರು.
ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ. ಬಂಜಗೆರೆ ಜಯಪ್ರಕಾಶ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸಾಹಿತ್ಯ ಕ್ಷೇತ್ರದಲ್ಲಿ ನೈಜ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದು ಮಹತ್ವದ ಕಾರ್ಯವಾಗಿದೆ ಎಂದರು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಅನುವಾದ ಕಾರ್ಯ ಅತ್ಯಂತ ಅಗತ್ಯವಾಗಿದೆ. ಇತರ ಭಾಷೆಗಳಲ್ಲಿರುವ ಉತ್ತಮ ಸಾಹಿತ್ಯವನ್ನು ಕನ್ನಡಕ್ಕೆ ತರುವುದರಿಂದ ಕನ್ನಡ ಓದುಗರಿಗೆ ವಿವಿಧ ಭಾಷೆಗಳ ಸಾಹಿತ್ಯದ ಪರಿಚಯವಾಗುತ್ತದೆ. ಅದೇ ರೀತಿ, ಕನ್ನಡದ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದಿಸುವುದರಿಂದ ಕನ್ನಡದ ಸಾಹಿತ್ಯಿಕ ಪರಂಪರೆಯನ್ನು ದೇಶ-ವಿದೇಶಗಳ ಓದುಗರಿಗೆ ತಲುಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುಸ್ತಕ ಬಹುಮಾನ ಪುರಸ್ಕೃತ ಡಾ.ಕೆ. ಶ್ರೀನಾಥ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸ್ವಂತ ಕೃತಿ ರಚಿಸುವುದಕ್ಕಿಂತಲೂ ಮತ್ತೊಂದು ಭಾಷೆಯ ಕೃತಿಯನ್ನು ಅದರ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಅನುವಾದಿಸುವುದು ಹೆಚ್ಚು ಕಠಿಣ ಕಾರ್ಯವಾಗಿದೆ ಎಂದು ಹೇಳಿದರು.
ಪುಸ್ತಕ ಬಹುಮಾನ ಪುರಸ್ಕೃತೆ ಡಾ.ಮಲರ್ ವಿಳಿ ಕೆ. ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರುಗಳಾದ ಪ್ರೊ. ಷಾಕಿರಾ ಖಾನಂ, ಡಾ. ಭಾರತಿದೇವಿ ಪಿ., ಡಾ. ಜೆ. ಕರಿಯಪ್ಪ ಮಾಳಿಗೆ ಹಾಗೂ ಪ್ರೊ. ಜಾಜಿ ದೇವೇಂದ್ರಪ್ಪ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ೨೦೨೬ನೇ ಸಾಲಿನ ಗೌರವ ಪ್ರಶಸ್ತಿಗೆ ಹಾಗೂ ೨೦೨೫ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಆಯ್ಕೆಯಾದ ಸಾಧಕರನ್ನು ಸನ್ಮಾನಿಸಿ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಅವರು, ಮರಾಠಿಯ ಮೊದಲ ನಾಟಕ ಹುಟ್ಟಿಕೊಳ್ಳಲಿಕ್ಕೆ ಕನ್ನಡದ ಯಕ್ಷಗಾನ ಕಾರಣವಾಗಿದೆ ಎಂದರು. ಮರಾಠಿ ಸಂಗೀತ ನಾಟಕಗಳ ಹುಟ್ಟಿಗೆ ಶ್ರೀಕೃಷ್ಣ ಪಾರಿಜಾತ ಕಾರಣವಾಗಿದೆ. ಶ್ರೀಕೃಷ್ಣ ಪಾರಿಜಾತ ಹುಟ್ಟಿಗೆ ತೆಲುಗಿನ ನಾಟಕಗಳು ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ. ಬಂಜಗೆರೆ ಜಯಪ್ರಕಾಶ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸಾಹಿತ್ಯ ಕ್ಷೇತ್ರದಲ್ಲಿ ನೈಜ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದು ಮಹತ್ವದ ಕಾರ್ಯವಾಗಿದೆ ಎಂದರು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಅನುವಾದ ಕಾರ್ಯ ಅತ್ಯಂತ ಅಗತ್ಯವಾಗಿದೆ. ಇತರ ಭಾಷೆಗಳಲ್ಲಿರುವ ಉತ್ತಮ ಸಾಹಿತ್ಯವನ್ನು ಕನ್ನಡಕ್ಕೆ ತರುವುದರಿಂದ ಕನ್ನಡ ಓದುಗರಿಗೆ ವಿವಿಧ ಭಾಷೆಗಳ ಸಾಹಿತ್ಯದ ಪರಿಚಯವಾಗುತ್ತದೆ. ಅದೇ ರೀತಿ, ಕನ್ನಡದ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದಿಸುವುದರಿಂದ ಕನ್ನಡದ ಸಾಹಿತ್ಯಿಕ ಪರಂಪರೆಯನ್ನು ದೇಶ-ವಿದೇಶಗಳ ಓದುಗರಿಗೆ ತಲುಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕನ್ನಡ ನಾಡಿನ ಭಾಷಾ ವೈವಿಧ್ಯ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸಾಹಿತ್ಯಿಕ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವಲ್ಲಿ ಅನುವಾದ ಮಹತ್ವದ ಪಾತ್ರ ವಹಿಸುತ್ತದೆ. ಕಾಲ ಬದಲಾದಂತೆ ತಂತ್ರಜ್ಞಾನವೂ ಬೆಳೆಯುತ್ತಿದ್ದು, ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಹೊಸ ತಂತ್ರಜ್ಞಾನಗಳ ಬಳಕೆ ಹೆಚ್ಚಾಗುತ್ತಿದೆ. ಆದರೂ ಭಾಷೆಯ ಸೂಕ್ಷ್ಮತೆ, ಸಾಹಿತ್ಯದ ಭಾವನೆ ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಸಮರ್ಪಕವಾಗಿ ಗ್ರಹಿಸಿ ಅನುವಾದಿಸುವ ಕಾರ್ಯಕ್ಕೆ ವಿಶೇಷ ಮಹತ್ವವಿದೆ ಎಂದರು.

bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್

ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಕುರಿತು ಅರಿಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
    In (ರಾಜ್ಯ ) ಜಿಲ್ಲೆ
  • ಹೆಸ್ಕಾಂ ಸಿಬ್ಬಂದಿಯಿಂದ ರೈತರ ಪಂಪಸೆಟ್ಟು ವಾಯರ್ ಕಟ್
    In (ರಾಜ್ಯ ) ಜಿಲ್ಲೆ
  • ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಕುರಿತು ಅರಿಯಬೇಕು
    In (ರಾಜ್ಯ ) ಜಿಲ್ಲೆ
  • ಕೆರೆಗಳ ಭರ್ತಿಗೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೌಹಾರ್ದತೆ, ಸಂಬಂಧ ಬೆಸೆವ ಬನ್ನಿ ವಿನಿಮಯ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅನುವಾದದಿಂದಲೇ ಕನ್ನಡ ಸಾಹಿತ್ಯ-ಸಂಸ್ಕೃತಿ ಜಗತ್ತಿಗೆ ಪರಿಚಯ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಪಾಟೀಲ‌ ಬನ್ನಿ ವಿನಿಮಯ
    In (ರಾಜ್ಯ ) ಜಿಲ್ಲೆ
  • ಕೆನಾಲ್ ಕೊನೆವರೆಗೆ ನೀರು ಹರಿಸಲು ಪೊಲೀಸರ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.