ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೨೬ರಂದು ಸೋಮವಾರ ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ ೯:೩೦ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರದ ಭವ್ಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
