ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ ಅರ್ಹ ಅಭ್ಯರ್ಥಿಗಳಿಗೆ ಒಂದು ತಿಂಗಳ ಅವಧಿಯ ಉಚಿತ ಕಂಪ್ಯೂಟರ್ ತರಬೇತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೆ ೧,೫೦೦ ರೂ. ಸಹಾಯಧನ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸ್ವಯಂ ಉದ್ಯೋಗಿಗಳನ್ನಾಗಿ ರೂಪಿಸುವ ಉದ್ದೇಶ ಈ ತರಬೇತಿಯದ್ದಾಗಿದೆ.
ಅರ್ಹತೆ ಮತ್ತು ವಯೋಮಿತಿ: ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ೧೮ ವರ್ಷ ಹಾಗೂ ಗರಿಷ್ಠ ೪೫ ವರ್ಷ ವಯೋಮಿತಿಯೊಳಗಿರಬೇಕು. ಕನಿಷ್ಠ ೧೦ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ: ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ ವಿಜಯಪುರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅ.೩೦ರ ಸಂಜೆ ೫.೩೦ ಗಂಟೆಯೊಳಗೆ ಅರ್ಜಿಗಳನ್ನು ಉಪನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ ವಿಜಯಪುರ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಆವರಣ, ಸ್ಟೇಷನ್ ಬ್ಯಾಕ್ ರೋಡ್, ಶಿಕಾರಖಾನೆ, ವಿಜಯಪುರ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ ಸಂಖ್ಯೆ: ೯೯೭೨೧೬೨೨೨೨-೯೪೪೮೬೪೪೨೨೦ ಉಪನಿರ್ದೇಶಕರು ಹಾಗೂ ಮೇಲ್ವಿಚಾರಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪನಿರ್ದೇಶಕರು (ಗ್ರಾ.ಕೈ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
