ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಖಾಲಿ ಇರುವ ಮೂರು ಬ್ಲಾಕ್ಗಳ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳನ್ನು (ಂಛಿಚಿಜemiಛಿ ಖesouಡಿಛಿe Peಡಿsoಟಿ ಜಿoಡಿ ಒeಟಿಣಚಿಟ ಊeಚಿಟಣh) ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ./ಎಂ.ಎಸ್ಸಿ. ಪದವಿ ಹೊಂದಿರಬೇಕು. ಶಾಲಾ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷಾ ಜ್ಞಾನದ ಜೊತೆಗೆ ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ ಮಾಸಿಕ ರೂ.೪೦,೦೦೦ ಗೌರವಧನ ಹಾಗೂ ರೂ.೧೦,೦೦೦ ಪ್ರಯಾಣ ಭತ್ಯೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ, ಎರಡು ಪ್ರತಿಗಳಲ್ಲಿ ಸಿದ್ಧಪಡಿಸಿ, ನವೆಂಬರ್.೭ರ ಸಂಜೆ ೪.೩೦ ಗಂಟೆಯೊಳಗಾಗಿ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ವಿಜಯಪುರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಈ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಮತ್ತು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ೯೪೪೮೯೯೯೩೩೧, ೯೦೦೮೨೪೦೦೭೨, ೯೯೭೨೩೬೨೪೦೩ ಹಾಗೂ ೯೯೪೫೩೩೨೩೬೪ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
