ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ. ಎ. ಡಿ. ಇ. ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಅಕ್ಟೋಬರ್ 26 ಸೋಮವಾರದಿಂದ ಅಕ್ಟೋಬರ್ 31 ಶನಿವಾರದವರೆಗೆ ನಿದ್ರಾಹೀನತೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.
ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವ 20 ರಿಂದ 50 ವರ್ಷದೊಳಗಿನವರು ಆರು ದಿನಗಳ ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಗಾಗಿ ಮೊ.8073518596 ಮತ್ತು 7030746226 ಗೆ ಸಂಪರ್ಕಿಸಬಹುದಾಗಿದೆ.
