ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಅವರು, ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿಯರಲ್ಲಿ ಒಬ್ಬರು. ತಮ್ಮ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ಸ್ವಾಭಿಮಾನದಿಂದ ನಾಡಿನ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ಅವರ ಜೀವನ ಮತ್ತು ಹೋರಾಟ ಇಂದಿನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಪ್ರೇಮ, ಧೈರ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಅಂಜಲಿ ಕನ್ನೊಳ್ಳಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

