Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಸತಿ ಯೋಜನೆ ಶೀಘ್ರ ಜಾರಿ; ಭೂಮಿ ಗುರುತಿಸಲು ಸೂಚನೆ

ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ

ಎ.ಎಸ್.ಪಾಟೀಲ ಕಾಲೇಜ್ ಎಂ.ಬಿ.ಎ ವಿಭಾಗಕ್ಕೆ ಅತ್ಯುತ್ತಮ‌ ರ್ಯಾಂಕ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಸತಿ ಯೋಜನೆ ಶೀಘ್ರ ಜಾರಿ; ಭೂಮಿ ಗುರುತಿಸಲು ಸೂಚನೆ
(ರಾಜ್ಯ ) ಜಿಲ್ಲೆ

ವಸತಿ ಯೋಜನೆ ಶೀಘ್ರ ಜಾರಿ; ಭೂಮಿ ಗುರುತಿಸಲು ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

‘ಪ್ರಜಾಸೇವಾ ಆಂದೋಲನ ಸಭೆ’ಯಲ್ಲಿ ಮುದ್ದೇಬಿಹಾಳ ಶಾಸಕ ಹಾಗೂ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರಲ್ಲಿ ಜಾಗೃತಿ ಹೆಚ್ಚಲು ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಮಾಹಿತಿ ನೀಡಬೇಕು ಎಂದು ಮುದ್ದೇಬಿಹಾಳ ಶಾಸಕ ಹಾಗೂ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು.
ಸಮೀಪದ ಯಲಗೂರ ಗ್ರಾಮದಲ್ಲಿ ಶನಿವಾರ ನಡೆದ ‘ಪ್ರಜಾಸೇವಾ ಆಂದೋಲನ ಸಭೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳ ರಸ್ತೆ, ನೀರಾವರಿ ಸೇರಿದಂತೆ ಜನರ ಅಗತ್ಯಗಳಿಗೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸರ್ಕಾರದಿಂದ ಕ್ಷೇತ್ರಕ್ಕೆ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದಿನ ಆಡಳಿತದಲ್ಲಿ ಹಣಕಾಸಿನ ಅನುಮೋದನೆ ಇಲ್ಲದೆ ಕೈಗೊಂಡ ಕಾಮಗಾರಿಗಳಿಂದ ಸಾವಿರಾರು ಕೋಟಿ ರೂ. ಬಾಕಿ ಉಳಿದಿತ್ತು. ಜನರ ಹಿತದೃಷ್ಟಿಯಿಂದ ಹಿಂದಿನ ಕಾಮಗಾರಿಗಳ ಜವಾಬ್ದಾರಿಯನ್ನೂ ಸರ್ಕಾರವೇ ನಿರ್ವಹಿಸುತ್ತಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ ?೯೦ ಸಾವಿರದಿಂದ ?೧ ಲಕ್ಷಕ್ಕೂ ಅಧಿಕ ಆರ್ಥಿಕ ನೆರವು ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಅರ್ಹರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರಿ ಜಮೀನು, ಗೋಮಾಳ ಹಾಗೂ ಪಡಾ ಭೂಮಿಯನ್ನು ಗುರುತಿಸಿ ವರದಿ ನೀಡುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ ಎಂದರು.
ಯಲಗೂರೇಶ್ವರ ಅನ್ನದಾಸೋಹ ಸಮಿತಿ ಹಾಗೂ ಪಿಕೆಪಿಎಸ್ ಅಧ್ಯಕ್ಷ ಶ್ಯಾಮ ಪಾತರದ, ಮುತ್ತಣ್ಣ ಮುತ್ತಣ್ಣವರ, ಶಾಸಕ ಸಿ.ಎಸ್. ನಾಡಗೌಡ ಅವರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎ.ಡಿ. ಅಮರವಾದಗಿ, ತಾ.ಪಂ.ಇಒ ವೆಂಕಟೇಶ ವಂದಾಲ, ಗ್ಯಾರಂಟಿ ಸಮಿತಿ ಅಧ್ಯಕ್ಷ ರಮೇಶ ಮಾಗಿ, ಬಿಇಓ ಎಂ.ಎಸ್. ಬಡದಾನಿ, ಯತೀಶ್ ಕೆ.ಎನ್. ಎಸ್.ಡಿ. ಕುಂಬಾರ, ಅಬೂಬಕರ ಬಾಗವಾನ, ಸಲೀಂ ಯಲಗೋಡ, ನಾನಾಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ವಿ
ವಿಧ ಇಲಾಖೆಗೆ ಸಂಬಂಧಿಸಿದ ಒಟ್ಟು ೨೯ ಅರ್ಜಿಗಳನ್ನು ಸ್ವೀಕರಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ

ಎ.ಎಸ್.ಪಾಟೀಲ ಕಾಲೇಜ್ ಎಂ.ಬಿ.ಎ ವಿಭಾಗಕ್ಕೆ ಅತ್ಯುತ್ತಮ‌ ರ್ಯಾಂಕ್

ಕೇಳಿಸಿಕೊಳ್ಳುವ ಪ್ರಕ್ರಿಯೆ

ನಿನ್ನ ಸೂಜಿಗಣ್ಣಿನ ನೋಟದೊಂದಿಗೆ..

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಸತಿ ಯೋಜನೆ ಶೀಘ್ರ ಜಾರಿ; ಭೂಮಿ ಗುರುತಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಎ.ಎಸ್.ಪಾಟೀಲ ಕಾಲೇಜ್ ಎಂ.ಬಿ.ಎ ವಿಭಾಗಕ್ಕೆ ಅತ್ಯುತ್ತಮ‌ ರ್ಯಾಂಕ್
    In (ರಾಜ್ಯ ) ಜಿಲ್ಲೆ
  • ಕೇಳಿಸಿಕೊಳ್ಳುವ ಪ್ರಕ್ರಿಯೆ
    In ವಿಶೇಷ ಲೇಖನ
  • ನಿನ್ನ ಸೂಜಿಗಣ್ಣಿನ ನೋಟದೊಂದಿಗೆ..
    In ವಿಶೇಷ ಲೇಖನ
  • ನಿನ್ನ ಸೂಜಿಗಣ್ಣಿನ ನೋಟದೊಂದಿಗೆ..
    In Uncategorized
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 24,2026
    In ದಿನಪತ್ರಿಕೆ
  • ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು
    In (ರಾಜ್ಯ ) ಜಿಲ್ಲೆ
  • ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.