ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗಿನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಂಬಗಿ- ಆಹೇರಿ ಕೆರೆಗೆ ನೀರು ಹರಿಸುವ ಸಂಬಂಧ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ರವಿವಾರ ನಗರದಲ್ಲಿ ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮುಳವಾಡ ಏತನೀರಾವರಿ ಯೋಜನೆ ವಿಜಯಪುರ ಮುಖ್ಯ ಕಾಲುವೆ ಮೂಲಕ ಹರಿಸಲಾಗುತ್ತಿರುವ ನೀರು ಕಾಲುವೆಯ ಕೊನೆಯ ಕೆರೆಯವರೆಗೂ ತಲುಪಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಇದರ ವ್ಯಾಪ್ತಿಯ ಪ್ರತಿಯೊಂದು ಕೆರೆಗೂ ನೀರು ತಲುಪುವವರೆಗೂ ಮೇಲ್ವಿಚಾರಣೆ ನಡೆಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಬಾರಿ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಅವರು, ಇದೇ ವೇಳೆ ನೀರು ಹರಿಸುವ ಕುರಿತು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಬಸವರಾಜ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನೀರು ಹರಿಸುವ ಸಂಬಂಧ ಮತ್ತು ಕಾಲುವೆಗಳ ದುರಸ್ತಿ ಸಂಬಂಧ ಸೂಕ್ತ ಮಾಹಿತಿ ನೀಡಿದರೆ ತಾವು ಜಲಸಂಪನ್ಮೂಲ ಸಚಿವ ಎನ್. ಚಲುವರರಾಯಸ್ವಾಮಿ ಅವರ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.
ಕೆಬಿಜೆಎನ್ಎಲ್ ಸೂಪರಿಂಟೆಂಡ್ ಎಂಜಿನಿಯರ್ ಗೋವಿಂದ ರಾಠೋಡ, ಎಕ್ಸಿಕ್ಯೂಟಿವ್ ಎಂಜಿನಿಯರುಗಲಾದ ಸುರೇಶ ರೂಢಗಿ, ಸಂಗಮೇಶ ಮುಂಡಾಸ, ಅಶೋಕರೆಡ್ಡಿ ಪಾಟೀಲ, ಕೊಳ್ಳಿ ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.

