ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ೨೦೨೬-೨೭ನೇ ಸಾಲಿನ ತೋಟಗಾರಿಕೆ ಮೇಳವನ್ನು ಡಿಸೆಂಬರ್.೨೩ರಿAದ ೨೫ರವರೆಗೆ ಹವಾಮಾನ ವೈಪರೀತ್ಯದಲ್ಲಿ ಸ್ಥಿರ ತೋಟಗಾರಿಕೆ ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾಗುತ್ತಿದೆ. ಈ ಮೇಳದ ಅಂಗವಾಗಿ ವಿಶ್ವವಿದ್ಯಾಲಯದ ವ್ಯಾಪ್ತಿಯ ರಾಜ್ಯದ ಪ್ರತಿ ಜಿಲ್ಲೆಯಿಂದ ತಲಾ ಒಬ್ಬರಂತೆ ಶ್ರೇಷ್ಠ ತೋಟಗಾರಿಕೆ ರೈತ ಹಾಗೂ ಶ್ರೇಷ್ಠ ತೋಟಗಾರಿಕೆ ರೈತ ಮಹಿಳೆಯ ಆಯ್ಕೆಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.೯ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆಯನ್ನು ಜಿಲ್ಲೆಯ ತಿಡಗುಂದಿಯ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ನೇರವಾಗಿ ಪಡೆಯಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ತಿತಿತಿ.uhsbಚಿgಚಿಟಞoಣ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತಿಡಗುಂದಿ–೫೮೬೧೧೯, ವಿಜಯಪುರ ಜಿಲ್ಲೆ, ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ೯೪೪೮೪೧೮೫೦೧ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
