ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲೂಕಿನ ಸೋಮದೇವರಹಟ್ಟಿ ತಾಂಡಾದ ಶ್ರೀ ದುರ್ಗಾದೇವಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿ ಕು. ರೋಹಿತ್ ಪಿಂಟು ಚವ್ಹಾಣ್ ಅವರು ಜಿಲ್ಲಾ ಮಟ್ಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಯಿಂದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದು, ಕ್ರೀಡಾಭಿಮಾನಿಗಳು ಮತ್ತು ಗ್ರಾಮಸ್ಥರಲ್ಲಿ ಸಂತಸ ಮನೆಮಾಡಿದೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಅಧ್ಯಕ್ಷ ಡಾ.ಜಗನು ಮಹಾರಾಜ್, ಮುಖ್ಯೋಪಾಧ್ಯಾಯ ಬದ್ದು ರಾಠೋಡ್, ಶಂಕರ್ ಲಮಾಣಿ ಹಾಗೂ ದೈಹಿಕ ಶಿಕ್ಷಕ ಅರುಣ್ ರಾಠೋಡ್ ಅವರು ಹರ್ಷ ವ್ಯಕ್ತಪಡಿಸಿ, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

