ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಇವರ ಮೂಲಕ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ ಅಂಚೆ ಮೂಲಕ ಕನ್ನಡ ಶಿಕ್ಷಣದ ೪೦ ನೇಯ ತಂಡದ ತರಬೇತಿ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರ ಅಧಿಕಾರಿ,ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ,ಮಾನಸ ಗಂಗೋತ್ರಿ ಮೈಸೂರ ಇವರಿಂದ ಪಡೆದು, ಡಿಸೆಂಬರ್ ೩೧ ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೨೧-೨೩೪೫೧೨೮ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
