ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ನವೆಂಬರ 6 ರಂದು ಸೋಮವಾರ ನಡೆಯಲಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಆವರಣದಲ್ಲಿರುವ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಾಧಕ ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಶ್ರೀ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ, ಅಥಣೇಶ ಅವರು ಸಾನಿಧ್ಯ ವಹಿಸಲಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮ- ಕುಲಾಧಿಪತಿ ಪ್ರೊ. ವೈ. ಎಂ. ಜಯರಾಜ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಿದ್ದಾರೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ. ಕೆ. ಪಾಟೀಲ, ಎ. ಎಸ್. ಪಾಟೀಲ ಕಾಲೇಜಿನ ಪ್ರಾಚಾರ್ಯ ಪ್ರೊ. ಬಿ. ಎಸ್. ಬೆಳಗಲಿ, ಸಂಸ್ಥೆಯ ಎಲ್ಲ ನಿರ್ದೇಶಕರು, ನಾನಾ ಕಾಲೇಜುಗಳ ಪ್ರಾಚಾರ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಆರ್. ಬಿ. ಕೊಟ್ನಾಳ ತಿಳಿಸಿದ್ದಾರೆ.
Related Posts
Add A Comment