ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ವಿ ನಾಗರಾಳ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಯಿಂದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಂತಾಗಿದೆ. ಕ್ರೀಡೆಯಲ್ಲಿ ಸಾಧನೆಗೈದ ಪೂರ್ವಿಗೆ ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಅವಟಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಯಲಗೂರಪ್ಪ ಚಿಮ್ಮಲಗಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದು, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

