Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ವಿವಿ: ಇಂದು ಫ್ರೆಶರ್ಸ್ ಡೇ ಸಂಭ್ರಮ

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.೬೦ ಕನ್ನಡ ಕಡ್ಡಾಯ

ಬಾಲಕರ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ವಿಪತ್ತು ನಿರ್ವಹಣಾ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಯಾವುದೇ ಭಾಗದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಗ್ರಾಮಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ವಹಿಸಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ಪ್ರತಿ ಎರಡು-ಮೂರು ದಿನಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಪರಿಸ್ಥಿತಿಯ ಕುರಿತು ನಿಗಾವಹಿಸಬೇಕು. ನೀರಿನ ಲಭ್ಯತೆ ಹಾಗೂ ಪೂರೈಕೆಯಲ್ಲಿನ ಸಮಸ್ಯೆ ಹಾಗೂ ಸಮಸ್ಯಾತ್ಮಕ ಪ್ರದೇಶಗಳ ಕುರಿತು ಚರ್ಚಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು.
ಕೆರೆಗಳಲ್ಲಿನ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ಕಾಲುವೆಗೆ ನೀರು ಹರಿಸುವ ಸಂದರ್ಭದಲ್ಲಿ ಕೆರೆ ಹಾಗೂ ಕಾಲುವೆಗಳಿಂದ ಯಾವ ಪ್ರದೇಶಗಳಲ್ಲಿ ನೀರು ಪೋಲಾಗುತ್ತಿದೆ ಎಂಬುದನ್ನು ಗುರುತಿಸಿ, ಅಂತಹ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಪ್ರಮುಖ ಕೆರೆಗಳು ಮತ್ತು ಕಾಲುವೆಗಳ ಬಳಿ ಅವಶ್ಯಕತೆ ಇರುವ ಕಡೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ನೀರು ಪೋಲಾಗದಂತೆ ತಡೆಯಲು ದಿನದ ೨೪ ಗಂಟೆಯೂ ನಿಗಾ ವಹಿಸುವಂತೆ ಸೂಚನೆ ನೀಡಿದರು.
ನೀರಿನ ಲಭ್ಯತೆ ಹಾಗೂ ಪೂರೈಕೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಅಗತ್ಯ ನೀರು ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಉಪ ವಿಭಾಗಾಧಿಕಾರಿ ಜುಫಿಶಾನ ಹಕ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಂಟಿ ಕೃಷಿ ನಿರ್ದೇಶಕ ಶಿವಾನಗೌಡ ಪಾಟೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್. ಸಂತೋಷ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಭಾಗವಹಿಸಿದ್ದರು.

BIJAPUR NEWS bjp congress patil public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ವಿವಿ: ಇಂದು ಫ್ರೆಶರ್ಸ್ ಡೇ ಸಂಭ್ರಮ

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.೬೦ ಕನ್ನಡ ಕಡ್ಡಾಯ

ಬಾಲಕರ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

ಅ.೨೯ ರಂದು ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ವಿವಿ: ಇಂದು ಫ್ರೆಶರ್ಸ್ ಡೇ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.೬೦ ಕನ್ನಡ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಬಾಲಕರ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅ.೨೯ ರಂದು ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅ.೨೯ ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು
    In (ರಾಜ್ಯ ) ಜಿಲ್ಲೆ
  • ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ಉದ್ದ ಜಿಗಿತದಲ್ಲಿ ಪೂರ್ವಿ ನಾಗರಾಳ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸವಾಲುಗಳನ್ನು ಮೆಟ್ಟಿ ನಿಂತು ನೈಜ ಪತ್ರಿಕೋದ್ಯಮ ಉಳಿಸಿ
    In (ರಾಜ್ಯ ) ಜಿಲ್ಲೆ
  • ಎನ್ಡಿಎ ಗೆಲುವು ಜಿಪಂ, ತಾಪಂ & ವಿಧಾನಸಭಾ ಚುನಾವಣೆಗೆ ದಿಕ್ಸೂಚಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಹೀನಾಯವಾಗಿ ತೊಲಗಲಿರುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.