ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕರ್ಮವನ್ನು ಅ.೨೯ರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೧೦:೩೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್.,ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–೨ ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್. ಕವಲಗಿ, ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ ಹಾಗೂ ಕೇಶವ ಪ್ರಸಾದ ಎಸ್, ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಎಸಂಬಣ್ಣಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಸಂತ ಹೊನಮೊಡೆ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
