ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ತಿಕೋಟಾದ ೧೧೦/೧೧ ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ೨೦ ಎಂ.ವಿ.ಎ. ೧೧೦/೩೩ ಕೆ.ವಿ. ಪರಿವರ್ತಕದ ಓ.ಎಲ್.ಟಿ.ಸಿ. ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ತಿಕೋಟಾ ೧೧೦ ಕೆ.ವಿ. ವಿದ್ಯುತ್ ಕೇಂದ್ರಗಳಿಂದ ಹೊರಹೋಗುವ ಎಲ್ಲ ೧೧ ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಹಾಗೂ ೩೩ ಬಿಜ್ಜರಗಿ ಉಪಕೇಂದ್ರದ ವ್ಯಾಪ್ತಿಯಲ್ಲಿ ಅ. ೨೯ರ ಬೆಳಿಗ್ಗೆ ೯ ರಿಂದ ಸಂಜೆ ೫ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
