ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಅವಶ್ಯಕತೆ ಇದ್ದು,ಸೂಕ್ತ ಕಟ್ಟಡ ಹೊಂದಿರುವ ಆಸಕ್ತ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಾಕಷ್ಟು ಸ್ಥಳಾವಕಾಶವಿರುವ ಹಾಗೂ ನೀರು, ಸ್ನಾನಗೃಹ ಮತ್ತು ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಹೊಂದಿರುವ ಸುಸಜ್ಜಿತ ಕಟ್ಟಡ ಅಗತ್ಯವಿದೆ.
ಸರ್ಕಾರ ನಿಗದಿಪಡಿಸುವ ವಾರ್ಷಿಕ ಬಾಡಿಗೆ ಮಿತಿಯೊಳಗೆ ಇಲಾಖೆಗೆ ಕಟ್ಟಡ ಬಾಡಿಗೆ ನೀಡಲು ಆಸಕ್ತಿ ಹೊಂದಿರುವ ಕಟ್ಟಡ ಮಾಲೀಕರು ನ. ೬ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. ಆಸಕ್ತರು ತಮ್ಮ ಅರ್ಜಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ ಅರಸು ಭವನ, ಜಿಲ್ಲಾ ಪಂಚಾಯಿತಿ ಕಚೇರಿ ಹತ್ತಿರ, ಕನಕದಾಸ ಬಡಾವಣೆ ಇಲ್ಲಿಗೆ ಸಲ್ಲಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
