ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಅ, ೨೯ರಂದು ಬೆಳಿಗ್ಗೆ ೧೧.೩೦ಕ್ಕೆ ಫ್ರೆಶರ್ಸ್ ಡೇ ಸಂಭ್ರಮ ಹಾಗೂ ಮಹಿಳಾ ಮೀಡಿಯಾ ಕ್ಲ್ಲಬ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕೃಷ್ಣ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಧ್ಯಕ್ಷ ಪ್ರೊ. ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಲಿದ್ದು. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ನಿಗಾರ್ ಸುಲ್ತಾನಾ ಹಾಗೂ ಡಾ. ಸಂದೀಪ್ ಮತ್ತು ವಿಭಾಗದ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ ಎಂದು ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಹಿಳಾ ವಿವಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

