ಉದಯರಶ್ಮಿ ದಿನಪತ್ರಿಕೆ
ಜೇವರ್ಗಿ: ತಾಲೂಕಿನಲ್ಲಿ ಬರ ಪರಿಸ್ಥಿತಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬಂದಲ್ಲಿ ಪರಿಹಾರ ಕಲ್ಪಿಸುವ ಕುರಿತು ಸಹಾಯವಾಣಿಯನ್ನು ಇಲ್ಲಿನ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ತೆರೆಯಲಾಗಿದೆ. ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 8762767573ಗೆ ಸಂಪರ್ಕಿಸಿ ಅಥವಾ ಕಛೇರಿಗೆ ಆಗಮಿಸಿ ದೂರುಗಳನ್ನು ನೀಡಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದೆಂದು ಜೇವರ್ಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
