Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗಠಾಣ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ
(ರಾಜ್ಯ ) ಜಿಲ್ಲೆ

ನಾಗಠಾಣ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

36,534 ಮತದಾರರ ಹೆಸರು ಡಿಲೀಟ್‌; ಅಂತಿಮ ಪಟ್ಟಿಯಲ್ಲಿ 2.42 ಲಕ್ಷ ಮತದಾರರು

ಉದಯರಶ್ಮಿ ದಿನಪತ್ರಿಕೆ

ಚಡಚಣ: ನಾಗಠಾಣ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 2,42,549 ಮತದಾರರು ಉಳಿದಿದ್ದಾರೆ. ಹಿಂದಿನ ಪಟ್ಟಿಯಲ್ಲಿದ್ದ 2,79,083 ಮತದಾರರ ಪೈಕಿ 36,534 ಮತದಾರರ ಹೆಸರುಗಳು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಮಾಹಿತಿ ನೀಡಿದರು.
ಮೊದಲ ಹಂತದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಏಜೆಂಟರು (ಬಿಎಲ್‌ಎ) ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ನಿಗದಿತ ಅರ್ಜಿ ನಮೂನೆಗಳನ್ನು ವಿತರಿಸಿದ್ದಾರೆ. ಎರಡನೇ ಹಂತದಲ್ಲಿ ಭರ್ತಿ ಮಾಡಿದ ನಮೂನೆಗಳನ್ನು ಪರಿಶೀಲಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಮೂರನೇ ಹಂತದಲ್ಲಿ ಸ್ವೀಕರಿಸಿದ ಆಕ್ಷೇಪಣೆಗಳನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಅಗತ್ಯ ದಾಖಲೆಗಳನ್ನು (ಅಧಿಕೃತ ದಾಖಲೆಗಳಿಂದ ಪರಿಶೀಲಿಸಿ)ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.
ನಾಗಠಾಣ ಮತಕ್ಷೇತ್ರದ ಹಿಂದಿನ ಮತದಾರರ ಪಟ್ಟಿಯಲ್ಲಿ 1,42,096 ಪುರುಷರು, 1,36,975 ಮಹಿಳೆಯರು ಹಾಗೂ 12 ತೃತೀಯ ಲಿಂಗದ ಮತದಾರರು ಸೇರಿದಂತೆ ಒಟ್ಟು 2,79,083 ಮತದಾರರಿದ್ದರು. ಅಂತಿಮ ಪಟ್ಟಿಯಲ್ಲಿ 1,24,682 ಪುರುಷರು, 1,17,855 ಮಹಿಳೆಯರು ಹಾಗೂ 12 ತೃತೀಯ ಲಿಂಗದ ಮತದಾರರು ಸೇರಿ ಒಟ್ಟು 2,42,549 ಮತದಾರರು ಉಳಿದಿದ್ದಾರೆ ಎಂದು ತಿಳಿಸಿದರು.
ಚಡಚಣದಲ್ಲೂ 16,528 ಮತದಾರರ ಹೆಸರು ಕೈಬಿಡಲಾಗಿದೆ
ಚಡಚಣ ಪಟ್ಟಣದ ಮತದಾರರ ಪಟ್ಟಿಯಲ್ಲಿಯೂ ಗಣನೀಯ ಬದಲಾವಣೆಯಾಗಿದೆ. ಹಿಂದಿನ ಪಟ್ಟಿಯಲ್ಲಿ 59,431 ಪುರುಷರು, 56,526 ಮಹಿಳೆಯರು ಹಾಗೂ 7 ತೃತೀಯ ಲಿಂಗದ ಮತದಾರರು ಸೇರಿದಂತೆ ಒಟ್ಟು 1,15,964 ಮತದಾರರಿದ್ದರು. ಅಂತಿಮ ಪಟ್ಟಿಯಲ್ಲಿ 51,556 ಪುರುಷರು, 47,872 ಮಹಿಳೆಯರು ಹಾಗೂ 8 ತೃತೀಯ ಲಿಂಗದ ಮತದಾರರು ಸೇರಿದಂತೆ ಒಟ್ಟು 99,436 ಮತದಾರರು ಉಳಿದಿದ್ದಾರೆ. ಹೀಗಾಗಿ ಚಡಚಣ ಪಟ್ಟಣದಲ್ಲಿ ಒಟ್ಟು 16,528 ಮತದಾರರ ಹೆಸರುಗಳು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಂಜಯ ಇಂಗಳೆ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಚಡಚಣ ಬಿಜೆಪಿ ಮಂಡಲ ಅಧ್ಯಕ್ಷ ಕಾಂತುಗೌಡ ಪಾಟೀಲ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಆರ್.ಡಿ. ಹಕ್ಕೆ, ಜೆಡಿಎಸ್ ಮುಖಂಡ ಭೀಮಾಶಂಕರ ವಾಳಿಖಿಂಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.