ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿಜಯಪುರ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರಾಚ್ಯ ಪ್ರಜ್ಞೆ’ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಅರ್ಜನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

