Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ.ನಾಗರಾಜ್ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಭಾರತವು ಪ್ರಜಾಪ್ರಭುತ್ವದ ಮೇಲೆ ಆಳವಾದ ನಂಬಿಕೆ ಇಟ್ಟಿರುವ ದೇಶ, ಸನಾತನ ಧರ್ಮ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಆದರೆ ಕಾಂಗ್ರೆಸ್ ನಂತಹ ಪಕ್ಷಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಲ್ಲಿ ಷಡ್ಯಂತ್ರ ಮಾಡುತ್ತಿದ್ದು, ಈ ಷಡ್ಯಂತ್ರದ ವಿರುದ್ಧ ಬಿಜೆಪಿ ಸಂಘಟಿತ ಹೋರಾಟ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಯ ಸಂಕಲ್ಪ‌ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ನಾಗರಾಜ್ ಹೇಳಿದರು.
​ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದ ಅವರು,​ರಾಹುಲ್ ಗಾಂಧಿ ಅವರು ಬೀದಿಗಳಲ್ಲಿ ಹೋರಾಟ ನಡೆಸುವ ಮೂಲಕ ಅಧಿಕಾರ ಪಡೆಯಲು ಸಾಧ್ಯವಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮೂಲಕ ಜನರ ವಿಶ್ವಾಸ ಗಳಿಸಿ, ಬಹುಮತದ ಆಧಾರದ ಮೇಲೆಯೇ ಅಧಿಕಾರ ಪಡೆಯಬೇಕು, ಅದನ್ನು ಬಿಟ್ಟು ಬೀದಿಗಳಲ್ಲಿ ಅರಾಜಕತೆ ಸೃಷ್ಟಿಸಿ ಅಧಿಕಾರ ಬದಲಾವಣೆ ತರುವುದಾದರೆ ಅದು ಸಾಧ್ಯವಿಲ್ಲ ಎಂದರು.
​ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಷ್ಟು ಸುಲಭವಾಗಿ ಅಲುಗಾಡಿಸಲು ಸಾಧ್ಯವಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಕರೆಯ ಮೇರೆಗೆ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಅರಾಜಕತೆಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.
​ಅಕ್ಟೋಬರ್ 23ರಿಂದ ನವೆಂಬರ್ 5ರವರೆಗೆ ದೇಶಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದೆ. ವಿಭಾಗೀಯ ಕೇಂದ್ರಗಳಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಯ ಸಂದೇಶವನ್ನು ತಲುಪಿಸಬೇಕು. ರಾಹುಲ್ ಗಾಂಧಿ ಅವರ ಹೇಳಿಕೆಗಳ ಕುರಿತು ವಾಸ್ತವಾಂಶಗಳನ್ನು ಜನರ ಮುಂದಿಡುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
​ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸಂಸದರಾದ ರಮೇಶ್ ಜಿಗಜಿಣಗಿ ಅವರು ಮಾತನಾಡಿ, ಕಾರ್ಯಕರ್ತರೇ ನಮ್ಮ ಪಕ್ಷದ ನಿಜವಾದ ಶಕ್ತಿ ಮತ್ತು ಆಸ್ತಿ, ಕಾರ್ಯಕರ್ತರಿಲ್ಲದೆ ನಾವು ಯಾರೂ ಅಲ್ಲ. ಪಕ್ಷದ ಸಂಘಟನೆಯ ಬಲವೇ ಕಾರ್ಯಕರ್ತರು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕಾರ್ಯಕರ್ತರ ಪರಿಶ್ರಮ, ಸಮರ್ಪಣೆ ಮತ್ತು ನಿಷ್ಠೆಯಿಂದಲೇ ಪಕ್ಷ ಸಂಘಟನೆ ಸದೃಢವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತರನ್ನು ಗೌರವದಿಂದ ಕಾಣಬೇಕು ಹಾಗೂ ಅವರ ಶ್ರಮವನ್ನು ಗುರುತಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ದೇಶದ ಶ್ರೇಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಕಾಂಗ್ರೆಸ್ ‌ಮೊದಲಾದ ಶಕ್ತಿಗಳ ಪ್ರಯತ್ನವನ್ನು ಬಿಜೆಪಿ ಕಾರ್ಯಕರ್ತರು ವಿಫಲಗೊಳಿಸಬೇಕು ಎಂದರು.
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮಹಾಪೌರ ಎಂ.ಎಸ್. ಕರಡಿ, ಕಾಸುಗೌಡ ಬಿರಾದಾರ, ಸಂಜು ಐಹೊಳೆ, ಉಮೇಶ ಕಾರಜೋಳ, ಚಂದ್ರಶೇಖರ ಕೌಟಗಿ, ಸಾಬು ಮಾಶಾಳ, ಸಂದೀಪ್ ಪಾಟೀಲ, ಕೃಷ್ಣ ಗೊನಾಳಕರ, ರಜನಿ ಸಂಬಣ್ಣಿ, ಭಾರತಿ ಬೂಯರ್ ಪಾಪು ಸಿಂಗ್ ರಜಪೂತ ಸೇರಿದಂತೆ ಬಿಜೆಪಿ ನಾಯಕರು, ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಎಲ್ಲಾ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.