Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
(ರಾಜ್ಯ ) ಜಿಲ್ಲೆ

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ನಿಗದಿತ ೨೧ ದಿನಗಳ ಅವಧಿಯೊಳಗೆ ನೋಂದಣಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಒಟ್ಟು ೭೬೩ ಜನನ-ಮರಣ ನೋಂದಣಿ ಘಟಕಗಳಿದ್ದು, ಎಲ್ಲ ಘಟಕಗಳಲ್ಲಿಯೂ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆ ಸಂಭವಿಸಿದ ೨೧ ದಿನಗಳ ನಿಗದಿತ ಅವಧಿಯೊಳಗೆ ನೋಂದಣಿ ಮಾಡಬೇಕು. ಹಾಗೂ ಸ್ಥಳೀಯ ಸಂಸ್ಥೆಗಳು, ಸರ್ಕಾರಿ ಆಸ್ಪತ್ರೆಗಳು ಹಾಗೂ ಗ್ರಾಮ ಪಂಚಾಯಿತಿಗಳ ನೋಂದಣಿ ಘಟಕಗಳಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ನೋಂದಣಿ ಮಾಡಬೇಕು.
ನಿಗದಿತ ಅವಧಿಯೊಳಗೆ ನೋಂದಣಿ ಮಾಡುವ ಕುರಿತು ಅಧಿಕಾರಿ, ಹಾಗೂ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಸಂಬಂಧ ಸಭೆಗಳನ್ನು ಆಯೋಜಿಸಿ, ನೋಂದಣಿ ಪ್ರಕ್ರಿಯೆ, ದಾಖಲೆಗಳ ನಿರ್ವಹಣೆ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ತರಬೇತಿ ನೀಡಬೇಕು. ತಾಲೂಕಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿ ಸಭೆಗಳನ್ನು ಕಾಲಕಾಲಕ್ಕೆ ನಡೆಸಿ, ನೋಂದಣಿ ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಜನನ ನಮೂನೆ-೧ ಹಾಗೂ ಮರಣ ನಮೂನೆ-೨ಗಳನ್ನು ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮರ್ಪಕವಾಗಿ ಭರ್ತಿ ಮಾಡಬೇಕು. ದಾಖಲೆಗಳಲ್ಲಿ ಮಾಹಿತಿದಾರರ ಸಹಿ, ಹೆಸರು, ಜನನ ದಿನಾಂಕ, ತಂದೆ-ತಾಯಿಯ ಹೆಸರು ಹಾಗೂ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸಬೇಕು. ಮರಣ ನೋಂದಣಿ ಸಂದರ್ಭದಲ್ಲಿ ಮೃತ ವ್ಯಕ್ತಿಯ ಹೆಸರನ್ನು ನಿಖರವಾಗಿ ದಾಖಲಿಸಬೇಕು ಎಂದು ಸೂಚಿಸಿದರು.
ಜನನ ಮತ್ತು ಮರಣ ನೋಂದಣಿ ವೇಳೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಅಥವಾ ಚಾಲನಾ ಪರವಾನಗಿಯಂತಹ ಗುರುತಿನ ದಾಖಲೆಗಳಲ್ಲಿ ಯಾವುದಾದರೊಂದರ ಜೆರಾಕ್ಸ್ ಪ್ರತಿಯನ್ನು ಪಡೆದು, ಅದರ ಆಧಾರದ ಮೇಲೆ ಸರಿಯಾದ ಹೆಸರನ್ನು ದಾಖಲಿಸಬೇಕು. ಮರಣ ನೋಂದಣಿ ಮಾಡುವಾಗ ಮೃತ ವ್ಯಕ್ತಿಗೆ ಸಂಬಂಧಿಸಿದ ದಾಖಲೆಗಳನ್ನೇ ಬಳಸಬೇಕು. ದಾಖಲೆಗಳಲ್ಲಿನ ತಪ್ಪುಗಳನ್ನು ತಪ್ಪಿಸಿ, ಭವಿಷ್ಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೋಂದಣಿ ಹಾಗೂ ಉಪನೋಂದಣಿ ಘಟಕಗಳಿಗೆ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ಸಂಗ್ರಹಿಸಿದ ಶುಲ್ಕವನ್ನು ನಿಯಮಿತವಾಗಿ ಸರ್ಕಾರಕ್ಕೆ ಜಮೆ ಮಾಡಬೇಕು. ಸಾಂಖ್ಯಿಕ ಹಾಗೂ ಕಾನೂನು ವರದಿಗಳಲ್ಲಿ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿಗಳ ರುಜು, ಮಾಹಿತಿದಾರರ ಹೆಸರು ಮತ್ತು ಸಹಿಯನ್ನು, ನೋಂದಣಿ ಸಂಖ್ಯೆ ಮತ್ತು ನೋಂದಣಿ ದಿನಾಂಕ ಕಡ್ಡಾಯವಾಗಿ ನಮೂದಿಸಬೇಕು ಎಂದು ಸೂಚಿಸಿದರು.
ವಿಳಂಬ ನೋಂದಣಿ ಪ್ರಕರಣಗಳನ್ನು ನಿಯಮಾನುಸಾರ ಮಾತ್ರ ನೋಂದಣಿ ಮಾಡಬೇಕು. ನಿಗದಿತ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೆ ವಿಳಂಬ ನೋಂದಣಿ ಮಾಡಬಾರದು. ನಿಗದಿತ ಸಮಯದೊಳಗೆ ಕಾನೂನು ದಾಖಲೆಗಳನ್ನು ಸಂರಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ಜನನ-ಮರಣ ನೋಂದಣಿ ಪ್ರಕ್ರಿಯೆಯಲ್ಲಿನ ಲೋಪಗಳನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಜುಫಿಶಾನ್ ಹಕ್, ತೋಟಗಾರಿಕಾ ಇಲಾಖಾ ಜಂಟಿ ನಿರ್ದೇಶಕರಾದ ಸಿದ್ರಾಮಯ್ಯ ಬರಗಿಮಠ ಆರೋಗ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕ ಆಲ್ತಾಫ ಮಣಿಯಾರ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಎಂ.ಡಿ. ಕುಲಕರ್ಣಿ, ಪರಮೇಶ ಕೆಂಚಣ್ಣವರ ಹಾಗೂ ಶ್ರೀಧರ ರಾಂಪೂರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.