Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
(ರಾಜ್ಯ ) ಜಿಲ್ಲೆ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರವಾಗಿದೆ. ಬೆಳೆ ಪರಿಹಾರ ಪಾವತಿ, ಬೆಳೆ ವಿಮೆ, ಪಹಣಿಯಲ್ಲಿ ಬೆಳೆ ನಮೂದು ಹಾಗೂ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ಸೌಲಭ್ಯಗಳನ್ನು ಒದಗಿಸಲು ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬಳಸಲಾಗುತ್ತದೆ. ಆದ್ದರಿಂದ ಸಮೀಕ್ಷೆಯನ್ನು ಸರಿಯಾಗಿ, ವಸ್ತುನಿಷ್ಠವಾಗಿ ಹಾಗೂ ನಿಖರವಾಗಿ ನಿರ್ವಹಿಸಿ, ಬೆಳೆಗಳ ವಿವರ ಮತ್ತು ವಿಸ್ತೀರ್ಣ ಸೇರಿದಂತೆ ಅಗತ್ಯ ಮಾಹಿತಿಯನ್ನು ಯಾವುದೇ ಲೋಪದೋಷಗಳಿಲ್ಲದೆ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೃಷಿ ಅಂಕಿ-ಅಂಶಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಋತುಗಳಲ್ಲಿ ನಡೆಯುವ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿಸ್ತೀರ್ಣ, ಭೂಬಳಕೆ, ಛಾಯಾಚಿತ್ರ ಮತ್ತು ನೀರಾವರಿ ಮೂಲಗಳ ವಿವರಗಳನ್ನು ಸಮರ್ಪಕವಾಗಿ ದಾಖಲಿಸಬೇಕು. ಹಿಸ್ಸಾವಾರು ಗಡಿಗಳ ನವೀಕರಣಕ್ಕೆ ಆದ್ಯತೆ ನೀಡಬೇಕು. ಸಮೀಕ್ಷೆಯ ಮೇಲ್ವಿಚಾರಕರು ದಾಖಲಾದ ಮಾಹಿತಿಯನ್ನು ಪರಿಶೀಲಿಸಿ ಅನುಮೋದಿಸಬೇಕು. ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮರು ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬೆಳೆ ಸಮೀಕ್ಷೆಯ ಆಧಾರದ ಮೇಲೆ ರೈತರಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಪಾವತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪಹಣಿಯಲ್ಲಿ ಬೆಳೆ ವಿವರಗಳನ್ನು ನಮೂದಿಸಲು ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ಅನುಕೂಲ ಕಲ್ಪಿಸಲು ಈ ದತ್ತಾಂಶಗಳು ಪ್ರಮುಖವಾಗಿವೆ. ಹೀಗಾಗಿ ಸಮೀಕ್ಷೆ ನಡೆಸುವಾಗ ಜಮೀನಿನ ವಾಸ್ತವಿಕ ಬೆಳೆ ಸ್ಥಿತಿಯನ್ನು ಪರಿಶೀಲಿಸಿ ನಿಖರವಾಗಿ ದಾಖಲಿಸಬೇಕು. ಇದರಿಂದ ಅರ್ಹ ರೈತರಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕ್ರಾಪ್ ಮಿಸ್ ಮ್ಯಾಚ್ ಆಗದಂತೆ ನಿಗಾವಹಿಸಿ ರೈತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ ಶೇ.೯೯.೫೦ರಷ್ಟು ಮುಂಗಾರು ಬೆಳೆ ಸಮೀಕ್ಷೆ ಪ್ರಗತಿ: ೨೦೨೬-೨೭ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆ ಶೇ.೯೯.೫೦ರಷ್ಟು ಪ್ರಗತಿ ಸಾಧಿಸಿದೆ. ಒಟ್ಟು ೬,೩೧,೬೬೩ ಸಬ್ ಸರ್ವೆ/ಹಿಸ್ಸಾಗಳ ಪೈಕಿ ೬,೨೮,೪೭೪ ಸಬ್ ಸರ್ವೆ/ಹಿಸ್ಸಾಗಳ ಸಮೀಕ್ಷೆ ಪೂರ್ಣಗೊಳಿಸಿ ಅಪ್‌ಲೋಡ್ ಮಾಡಲಾಗಿದೆ. ಇನ್ನು ೩,೧೮೯ ಸಬ್ ಸರ್ವೆ/ಹಿಸ್ಸಾಗಳ ಸಮೀಕ್ಷೆ ಬಾಕಿ ಉಳಿದಿದೆ ಎಂದು ಕೃಷಿ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿಗಳಾದ ಜುಫಿಶಾನ್ ಹಕ್, ತೋಟಗಾರಿಕಾ ಇಲಾಖಾ ಜಂಟಿ ನಿರ್ದೇಶಕರಾದ ಸಿದ್ರಾಮ ಬರಗಿಮಠ ಆರೋಗ್ಯಾಧಿಕಾರಿ ಮಲ್ಲನಗೌಡ ಪಾಟೀಲ, ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕ ಆಲ್ತಾಫ ಮಣಿಯಾರ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಎಂ.ಡಿ. ಕುಲಕರ್ಣಿ, ಪರಮೇಶ ಕೆಂಚಣ್ಣವರ ಹಾಗೂ ಶ್ರೀಧರ ರಾಂಪೂರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.