Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದಸರಾ – ಶಕ್ತಿಯ ಆರಾಧನೆ

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಧಿಕೃತ ಮದ್ಯ ಮಾರಾಟ ತಡೆಗೆ ಮಹಿಳೆಯರ ಆಗ್ರಹ
(ರಾಜ್ಯ ) ಜಿಲ್ಲೆ

ಅನಧಿಕೃತ ಮದ್ಯ ಮಾರಾಟ ತಡೆಗೆ ಮಹಿಳೆಯರ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಆಗ್ರಹಿಸಿ ಗ್ರಾಮದ ಸರಸ್ವತಿ ಮಹಿಳಾ ಸ್ವಸಹಾಯ ಸಂಘ, ಕರ್ನಾಟಕ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಸೇರಿ ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಚಟ್ನಳ್ಳಿ ಗ್ರಾಮದ ಮಹಿಳೆಯರು, ಕರ್ನಾಟಕ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ತಮಗೆ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ೮ನೇ ವಾರ್ಡಿನ ಸದಸ್ಯೆ ತನುಶ್ರೀ ಶರಣಗೌಡ ಪಾಟೀಲ, ಸರಸ್ವತಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಮರೆವ್ವ ಹರಿಜನ ಹಾಗೂ ದಲಿತ ಸಂಘರ್ಷ ಸಮೀತಿಯ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ ಮಾತನಾಡಿ, ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಿರಾಣಿ, ಚಹಾ, ಪಾನ್ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸುಮಾರು ೩ ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕೃಷಿ ಅವಲಂಬಿತ ಕುಟುಂಬಗಳೇ ಹೆಚ್ಚಾಗಿವೆ. ಇವರ ದಿನದ ಆದಾಯ ಎರಡು ನೂರುಗಳಾಗಿದ್ದು, ಈಗ ಕುಟುಂಬದ ಪುರುಷರು ತಾವು ದುಡಿದು ತಂದ ಹಣವನ್ನು ಕುಡಿತಕ್ಕೆ ಖರ್ಚು ಮಾಡುತ್ತಿದ್ದಾರೆ. ಈ ಕುರಿತು ತಾಯಿ, ಹೆಂಡತಿ ಪ್ರಶ್ನಿಸಿದರೆ ಅವರ ಮೇಲೆ ಕೈ ಮಾಡುವುದಕ್ಕೆ ಹಿಂಜರಿಯುವುದಿಲ್ಲ. ಹೀಗಾದರೆ ಬಡಕುಟುಂಬಗಳು ಬದುಕುವುದಾದರೂ ಹೇಗೆ ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಅನಧಿಕೃತವಾಗಿ ಮದ್ಯ ಮರಾಟ ಮಾಡುವುದರ ಕುರಿತು ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಅಕ್ರಮ ಮಾರಾಟದ ಕುರಿತು ಕ್ರಮ ಕೈಗೊಳ್ಳದೇ ಇದ್ದಲ್ಲಿ ಮಕ್ಕಳೊಂದಿಗೆ ಆಗಮಿಸಿ ತಹಶೀಲ್ದಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ನಂತರ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಅಕ್ಕಮಹಾದೇವಿ ಅಗಸರ, ಹಳ್ಳೆವ್ವ ಮಾದರ, ಲಕ್ಷ್ಮೀಬಾಯಿ ಹರಿಜನ, ಶೇಖಮ್ಮ ಬಿರಾದಾರ, ಶ್ರೀದೇವಿ ಹೂಗಾರ, ರೇಣುಕಮ್ಮ ಬಿರಾದಾರ, ಶಂಕ್ರೆಮ್ಮ ಹೂಗಾರ, ಶಂಕ್ರೆಮ್ಮ ಬಡಿಗೇರ, ಬೋರಮ್ಮ ಹರಿಜನ, ರಾಜಶ್ರೀ ಅಗಸರ, ಶರಣಗೌಡ ಪಾಟೀಲ, ಬಸನಗೌಡ ಪಾಟೀಲ, ಬೈರಡೆಪ್ಪ ಹದನೂರ, ರಮೇಶ ಹರಿಜನ, ಸಂಜೀವಕುಮಾರ ಪೂಜಾರಿ, ಶಂಕರಲಿಂಗ ಹೂನಳ್ಳಿ, ನಿಂಗಪ್ಪ ಹದ್ನೂರ, ಸಂಗಣ್ಣ ಸಜ್ಜನ ಸಂಗಪ್ಪ ಹದನೂರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಸರಾ – ಶಕ್ತಿಯ ಆರಾಧನೆ

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದಸರಾ – ಶಕ್ತಿಯ ಆರಾಧನೆ
    In ವಿಶೇಷ ಲೇಖನ
  • ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.