ಉದಯರಶ್ಮಿ ದಿನಪತ್ರಿಕೆ
ಚಡಚಣ: ಸಮೀಪದ ಉಮರಜ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪೂಜಾ ಪಾಟೀಲ ಜಿಲ್ಲಾ ಮಟ್ಟದ ಪ್ರಾಜ್ಯಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿಜಯಪುರ ನಗರದ ವಿ.ಬಿ.ದರ್ಬಾರ್ ಸಂಯುಕ್ತ ಪದವಿ ಕಾಲೇಜಿನ ಸಂಭಾಂಗಣದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯ ಗುರುಮಾತೆ, ಸಹ ಶಿಕ್ಷಕ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

