ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಫಾಸ್ಟ ಪುಡ್ ಟ್ರಕ್ ಟೈಲರ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಹೈನುಗಾರಿಕೆ, ಗಂಗಾ ಕಲ್ಯಾಣ,ಭೂ ಒಡೆತನ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿದೆ.
ಈಗಾಗಲೇ ೨೦೨೩-೨೪ ಹಾಗೂ ೨೦೨೪-೨೫ರ ಅವಧಿಯಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿಗಳನ್ನು ಕರ್ನಾಟಕ ಒನ್, ಗ್ರಾಮ ಒನ್,ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಲ್ಲಿಸಬಹುದಾಗಿದೆ ಎಂದು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
