ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ೨೦೨೬ನೇ ಸಾಲಿನ ಅರ್ಹರಾದ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಸಹಕಾರಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಅ.೩೧ರೊಳಗಾಗಿ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
