ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲದಂಡೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕೃಷ್ಣಾ ಭಾಗ್ಯ ಜಲನಿಗಮ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಅವರು, ಈ ವರ್ಷ ತೀವ್ರ ಬರಗಾಲ ಇರುವದರಿಂದ ನಮ್ಮ ರಾಜ್ಯಕ್ಕೆ ಸಾಕಾಗುವಷ್ಟು ನೀರಿಲ್ಲ. ಹೀಗಿರುವಾಗ ನಿಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಬೇರೆ ರಾಜ್ಯಕ್ಕೆ ನೀರು ಬಿಡುವುದು ಖಂಡಿಸುತ್ತೇವೆ. ರೈತರು ಸಾಲ ಮಾಡಿ ಬೀಜ ಗೊಬ್ಬರ ಹಾಕಿ ಸಂಕಷ್ಟದಲ್ಲಿ ಇದ್ದಾರೆ ಹೀಗಿರುವಾಗ ನೀವು ನೀರು ಬಿಡದೆ ಹೋದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಗಡಿ ಬಾಗದಲ್ಲಿ ಜನ ಜಾನುವಾರಗಳಿಗೂ ನೀರಿಲ್ಲ ಆದುದರಿಂದ ಅತೀ ಬೇಗ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲದಂಡೆಗೆ ನೀರು ಹರಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ, ರಮೇಶ ಬಿರಾದಾರ, ಕನ್ನಡ ರಘು ಹಾಗೂ ಪದಾಧಿಕಾರಿಗಳು ಇದ್ದರು.

