ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಎನ್ಎಸ್ಎಸ್ ಘಟಕದಿಂದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕಕ್ಕೆ 2026 ನೇ ಸಾಲಿನ ಅತ್ಯುತ್ತಮ ಎನ್ಎಸ್ಎಸ್ ಸೇವಾ ಘಟಕ ಹಾಗೂ ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿಗಳಾದ ಡಾ.ಮಿಲನ್ ರಾಠೋಡ, ಡಾ.ತರನ್ನುಮ್ ಜಬೀನ್ ಖಾನ ಅವರಿಗೆ ಅತ್ಯುತ್ತಮ ಎನ್ಎಸ್ಎಸ್ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕಾಲೇಜಿನ ಆಡಳಿತಾಧಿಕಾರಿಗಳು ಪ್ರೊ.ವಿ.ಎಸ್.ಬಗಲಿ, ಪ್ರಾಚಾರ್ಯ ಡಾ.ಶ್ರೀನಿವಾಸ ಎ.ಟಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

