ಇಂದು ವಿಜಯಪುರದಲ್ಲಿ ನಡೆವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ.ಪಾಟೀಲ ಅವರಿಂದ ಇಂದುಶೇಖರ ಮಣೂರ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಹೆಸರಾಂತ ’ಉದಯರಶ್ಮಿ’ ದಿನಪತ್ರಿಕೆಯ ಸಂಪಾದಕ ಇಂದುಶೇಖರ ಮಣೂರ ಅವರು ಜಿಲ್ಲಾಡಳಿತ ಕೊಡಮಾಡುವ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ಈ ಪ್ರಶಸ್ತಿ ಗೌರವ ನೀಡಲಾಗುತ್ತದೆ.
ನವೆಂಬರ್ ೧ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಸಂಪಾದಕ ಇಂದುಶೇಖರ ಮಣೂರ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

