ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಹಿರಿಯ ಕಲಾವಿದ ಹಾಗೂ ಚಿತ್ರಕಲಾ ಶಿಕ್ಷಕ ಶ್ರೀಶೈಲ ಹೂಗಾರ ಅವರು ಭಾನುವಾರ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾದರು.
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ಈ ಗೌರವ ನೀಡಲಾಗುತ್ತದೆ.
ನವೆಂಬರ್ ೧ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ
ಅವರಿಗೆ ಗೌರವಿಸಲಾಯಿತು.

