Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹೊನವಾಡ ಗ್ರಾಮದ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಹೇಳಿದ್ದಾರೆ.
ರವಿವಾರ ತಿಕೋಟಾ ತಾಲೂಕಿನ‌ ಹೊನವಾಡ ಗ್ರಾಮದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಸಹಯೋಗದಲ್ಲಿ ಸಿಎಸ್‌ಆರ್ ಅನುದಾನದಡಿ ಕೆಬಿಎಂಪಿಎಸ್ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ರವಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ಅದರಲ್ಲೂ ಹೆಣ್ಣುಮಕ್ಕಳಿಗಾಗಿ ಹೈಸ್ಕೂಲ್ ಮಂಜೂರು ಮಾಡಿಸಲಾಗಿದೆ. ಈ ಭಾಗದಲ್ಲಿ ಮಾಡಿರುವ ನೀರಾವರಿಯಿಂದಾಗಿ ಹೊನವಾಡವೀಗ ನಿಜವಾದ ಅರ್ಥದಲ್ಲಿ ಹೊನ್ನಿನವಾಡವಾಗಿದೆ, ಇಲ್ಲಿ ವರ್ಷಕ್ಕೆ 70 ಸಾವಿರ ಟನ್ ಕಬ್ಬು ಬೆಳೆಯಲಾಗುತ್ತಿದೆ ಎಂದು ಅವರು ಹೇಳಿದರು.
ಸರಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಇಲ್ಲಿಯ ಉರ್ದು ಶಾಲೆಗೂ ಕಟ್ಟಡ ನಿರ್ಮಿಸಿ ಒಂದೇ ಸಲ ಉದ್ಘಾಟಿಸಲಾಗುವುದು. ಹಳ್ಳಿಯ ಮಕ್ಕಳೂ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು. ಸುಶಿಕ್ಷಿತರಾಗಬೇಕು, ಶಿಕ್ಷಕರು ಸುಸಜ್ಜಿತ ಶಾಲೆಯ ಹೃದಯವಾಗಿ ಒಳ್ಳೆಯ ವಿದ್ಯೆ ನೀಡಬೇಕು ಎಂದು ಸಚಿವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಪ್ರಾಸ್ತಾವಿಕ ಮಾತನಾಡಿ, ರೂ. 360 ಕೋ.‌ ಸಿ.ಎಸ್.ಆರ್. ಅನುದಾನ ಬಳಸಲು ಸಚಿವರ ಸೂಚನೆಯಂತೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ತಿಕೋಟಾ ಹಿರೇಮಠದ ಶಿವಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.
ವಿಮಾನ ನಿಲ್ದಾಣದ
ಹಣಕಾಸು ವಿಭಾಗದ ಮುಖ್ಯಸ್ಥ ಭಾಸ್ಕರ ಆನಂದ ರಾವ, ಹಿರಿಯ ಉಪಾಧ್ಯಕ್ಷ ಅನಿಲಕುಮಾರ ಪಾಟೀಲ,
ಕಾರ್ಪೊರೇಟ್ ವಿಭಾಗದ ದಿನೇಶಕುಮಾರ, ಸಿಎಸ್‌ಆರ್ ಮುಖ್ಯಸ್ಥೆ ಸೌಮ್ಯಾ, ಹಿರಿಯ ವ್ಯವಸ್ಥಾಪಕ ಚಂದ್ರಶೇಖರ ಬಿರಾದಾರ, ಅಧಿಕಾರಿಗಳಾದ ಶ್ವೇತಾ, ಸುಮಲತಾ, ಜಿ. ಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ, ಮುಖಂಡರಾದ ವಿಜಯಕುಮಾರ ಹಿರೇಮಠ, ಭಾಗೀರಥಿ ತೇಲಿ, ಭೀಮನಗೌಡ ಪಾಟೀಲ ಕೋಟ್ಯಾಳ, ಸಿದ್ದು ಗೌಡನವರ, ತುಕಾರಾಮ ಧಡಕೆ ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕ ಎ. ಕೆ. ಮಸಳಿ ಸ್ವಾಗತಿಸಿದರು. ಮಹತಾಬ ಕಾಗವಾಡ ವಂದಿಸಿದರು. ಬಿ. ಕೆ. ಬಿರಾದಾರ ಹಾಗೂ ಎಸ್‌. ಎಸ್. ಹಾದಿಮನಿ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ
    In (ರಾಜ್ಯ ) ಜಿಲ್ಲೆ
  • ೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಅನೇಕರ ಹೋರಾಟ ಮತ್ತು ತ್ಯಾಗದಿಂದ ಏಕೀಕರಣ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ :ಶಾಸಕ ಕಟಕದೊಂಡ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕಲಾವಿದ ಶ್ರೀಶೈಲ ಹೂಗಾರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.