Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ
(ರಾಜ್ಯ ) ಜಿಲ್ಲೆ

ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ಕನ್ನಡ ಸಾಹಿತ್ಯ ಪರಿಷತ್ ಗೆಳೆಯರ ಬಳಗದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲೆ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಉದಯ ರಶ್ಮಿ ದಿನಪತ್ರಿಕೆಯ ಸಂಪಾದಕ ಇಂದುಶೇಖರ ಮಣೂರ ಹಾಗೂ ಕೊಲಾಜ್ ಕಲಾವಿದ ಈರಣ್ಣ ಬಡಿಗೇರ ಅವರು ವಿಜಯಪುರ ಜಿಲ್ಲಾಡಳಿತ ನೀಡುವ ಪ್ರತಿಷ್ಠಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಉಭಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಉದಯರಶ್ಮಿ ದಿನಪತ್ರಿಕೆಯ ಸಂಪಾದಕರಾದ ಇಂದುಶೇಖರ ಮಣೂರ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ, ಸಮಾಜಮುಖಿ ಚಿಂತನೆ ಹಾಗೂ ಜನಪರ ಕಾಳಜಿಯನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಪತ್ರಿಕಾ ರಂಗಕ್ಕೆ ಸಂದ ಹೆಮ್ಮೆಯ ಸಂಗತಿಯಾಗಿದೆ.
ಕೊಲಾಜ್ ಕಲೆಯ ಮೂಲಕ ಸೃಜನಶೀಲತೆ, ಕಲಾತ್ಮಕ ನೈಪುಣ್ಯ ಹಾಗೂ ವಿಶಿಷ್ಟ ಅಭಿವ್ಯಕ್ತಿಯನ್ನು ಅನಾವರಣಗೊಳಿಸುತ್ತಿರುವ ಈರಣ್ಣ ಬಡಿಗೇರ ಅವರು ಕಲಾಕ್ಷೇತ್ರದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದಾರೆ. ತಮ್ಮ ಕಲಾಸಾಧನೆಯ ಮೂಲಕ ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿರುವ ಅವರ ಸೇವೆಯನ್ನು ಜಿಲ್ಲಾಡಳಿತ ಗುರುತಿಸಿರುವುದು ಕಲಾಲೋಕಕ್ಕೆ ಸಂದ ಗೌರವವಾಗಿದೆ.
ಈ ಇಬ್ಬರು ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ ಗೆಳೆಯರ ಬಳಗದ ಅಧ್ಯಕ್ಷ ರಾಜಶೇಖರ ಕೂಚಬಾಳ, ಸಂಚಾಲಕ ಸಿದ್ಧಲಿಂಗ ಚೌಧರಿ, ಜಿ.ಪಿ. ಪೋರವಾಲ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರವಿ ಗೋಲಾ ಉದ್ಯಮಿ ಸಿದ್ದು ಚಿಂಚೋಳಿ ಸಾಹಿತಿ ಮೌಲಾಲಿ ಆಲಗೂರ ಸೇರಿದಂತೆ ಬಳಗದ ಎಲ್ಲ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಕಲೆ ಮತ್ತು ಪತ್ರಿಕೋದ್ಯಮ ಸಮಾಜದ ಎರಡು ಮಹತ್ವದ ಕನ್ನಡಿಗಳಾಗಿವೆ. ಕಲಾವಿದ ತನ್ನ ಕಲಾಕೃತಿಯ ಮೂಲಕ ಸಮಾಜದ ಭಾವನೆಗಳಿಗೆ ರೂಪ ನೀಡಿದರೆ, ಪತ್ರಕರ್ತ ತನ್ನ ಲೇಖನಿಯ ಮೂಲಕ ಸಮಾಜದ ನೋವು-ನಲಿವುಗಳಿಗೆ ಧ್ವನಿಯಾಗುತ್ತಾನೆ. ಇಂತಹ ಎರಡು ವಿಭಿನ್ನ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಿರುವುದು ಜಿಲ್ಲೆಯ ಸಾಂಸ್ಕೃತಿಕ ಹಾಗೂ ಪತ್ರಿಕಾ ಕ್ಷೇತ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಬಳಗದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ಇಬ್ಬರು ಸಾಧಕರ ಸೇವೆ ಯುವಪೀಳಿಗೆಗೆ ಸ್ಫೂರ್ತಿಯಾಗಲಿ. ಅವರ ಸಾಧನೆಯ ಪಯಣ ಮತ್ತಷ್ಟು ಎತ್ತರಕ್ಕೇರಲಿ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಹೆಚ್ಚಿನ ಗೌರವ, ಮನ್ನಣೆಗಳು ದೊರೆಯಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ಗೆಳೆಯರ ಬಳಗದ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ
    In (ರಾಜ್ಯ ) ಜಿಲ್ಲೆ
  • ೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಅನೇಕರ ಹೋರಾಟ ಮತ್ತು ತ್ಯಾಗದಿಂದ ಏಕೀಕರಣ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ :ಶಾಸಕ ಕಟಕದೊಂಡ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕಲಾವಿದ ಶ್ರೀಶೈಲ ಹೂಗಾರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.