ದೇವರಹಿಪ್ಪರಗಿಯಲ್ಲಿ ೭೧ನೇ ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮ
ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ೭೧ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕ ನೂರಾರು ವರ್ಷಗಳ ಇತಿಹಾಸ ಹೊಂದಿ, ಭವ್ಯ ಪರಂಪರೆಯ ಮೂಲಕ ಕನ್ನಡ ನಾಡಾಗಿ ಬೆಳಗುತ್ತಿದೆ. ಎಂದರು.
ತಹಶೀಲ್ದಾರ ನಿಂಗಣ್ಣ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ರಹಿಮಾನ ಕಣಕಾಲ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದು ಮೇಲಿನಮನಿ ಗೀತೆ ಪ್ರಸ್ತುತ ಪಡಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದ ಮುಂಚೆ ನಾಡದೇವಿ ಮೆರವಣಿಗೆ ಡೊಳ್ಳು ವಾದ್ಯಗಳೊಂದಿಗೆ ಮೊಹರೆ ಹಣಮಂತರಾಯದಿಂದ ಅಂಬೇಡ್ಕರ ವೃತ್ತದ ಮೂಲಕ ಸಾಗಿ ಪಂಚಾಚಾರ್ಯ ಕಲ್ಯಾಣ ಮಂಟಪ ತಲುಪಿತು.
ಗ್ರೇಡ್-೨ ತಹಶೀಲ್ದಾರ ಎಂ.ಜಿ.ಬಿರಾದಾರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಶೀನಾಥ ಬಜಂತ್ರಿ, ಸುಮಂಗಲಾ ಸೆಬೇನವರ, ಪಿಎಸೈ ಸಚೀನ ಆಲಮೇಲಕರ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಡಾ.ಆರ್.ಆರ್.ನಾಯಿಕ, ವ್ಹಿ.ಕೆ.ಪಾಟೀಲ, ಪ್ರಕಾಶ ಮಲ್ಹಾರಿ, ಬಸವರಾಜ ದೇವಣಗಾಂವ, ಸಿ.ಬಿ.ಗಡಗಿ, ಜಿ.ಪಿ.ಬಿರಾದಾರ ವಿಜಯಲಕ್ಷ್ಮಿ ನವಲಿ, ಅರುಣ ಕೋರವಾರ, ಪಿ.ಸಿ.ತಳಕೇರಿ ಸೇರಿದಂತೆ ಸಿದ್ಧೇಶ್ವರ ಸ್ವಾಮೀಜಿ ಶಾಲೆ ಹಾಗೂ ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕ ಸಿಬ್ಬಂದಿ ಇದ್ದರು.

