Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ
(ರಾಜ್ಯ ) ಜಿಲ್ಲೆ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ | ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ | ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ ೧೩ ತಾಲೂಕುಗಳ ೨೧೧ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ೧೧ ನಗರ ಪ್ರದೇಶಗಳಲ್ಲಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯದ ಹಿನ್ನೀರನ್ನು ಶುದ್ಧೀಕರಿಸಿ ಪೂರೈಸಲು ಒಟ್ಟು ೩೦೫೯ ಕೋಟಿ ರೂ. ನಿಗದಿಪಡಿಸಿದ್ದು, ಇದೂವರೆಗೆ ೨೦೯೫ ಕೋಟಿ ರೂಪಾಯಿಗಳ ವೆಚ್ಛ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ನೆರೆದ ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ಆರ್ಥಿಕ ಅಭಿವೃದ್ಧಿ, ಉದ್ಯಮ ಸ್ಥಾಪನೆ ಮತ್ತು ಉದ್ಯೋಗ ಸೃಷ್ಠಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಡಿ ನವ್ಹಂಬರ್-೨೦೨೫ ರಿಂದ ಇಲ್ಲಿಯವರೆಗೆ ಒಟ್ಟು ೬೭೧೩ ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಆನ್ ಲೈನ್ ಮೂಲಕ ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆದಿರುತ್ತವೆ. ಇದರಲ್ಲಿ ೩೨ ಕೋಟಿ ೪೩ ಲಕ್ಷ ಬಂಡವಾಳ ಹೂಡಿಕೆಯಾಗಿದ್ದು, ೮೧ ಸಾವಿರ ಉದ್ಯೋಗಾವಕಾಶಗಳು ಸೃಷ್ಠಿಯಾಗಿವೆ ಎಂದರು.
ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ ಮುಳವಾಡ ಹಂತ-೨ ರಲ್ಲಿ ರಿಲಾಯನ್ಸ್ ಕಂಜ್ಯೂಮರ್ ಪ್ರೋಡಕ್ಟ್ ಲಿಮಿಟೆಡ್ ಬೆಂಗಳೂರು ಇವರಿಂದ ೧೬೨೨ ಕೋಟಿ ಯೋಜನಾ ವೆಚ್ಚದಲ್ಲಿ ಪ್ಯಾಕೇಜ್ಡ್ ಕಾರ್ಬೋನೇಟೆಡ್ ಸಾಫ್ಟ್ ಡ್ರಿಂಕ್ಸ್ ಮತ್ತು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಘಟಕ ಸ್ಥಾಪಿಸಲು ಅನುಮೋದನೆ ದೊರೆತಿದ್ದು, ಘಟಕ ಸ್ಥಾಪನೆಗೆ ಇದೇ ನವೆಂಬರ್ ೧೬ ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದ ಸಚಿವರು, ಇದರಿಂದ ೧೨೦೦ ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಎಂದರು.
ಡಿ. ೧೩ ರಂದು ಗ್ರೀನ್ ಮ್ಯಾರಾಥಾನ್ : ೨೦೨೬-೨೭ನೇ ಸಾಲಿನ ವೃಕ್ಷೋತ್ಥಾನ ಮ್ಯಾರಾಥಾನ್ ಕಾರ್ಯಕ್ರಮವನ್ನು ಬರುವ ಡಿಸೆಂಬರ್ ೧೩ರಂದು ಹಮ್ಮಿಕೊಳ್ಳಲಾಗಿದ್ದು, ೨೦ ಸಾವಿರಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಭಾಗವಹಿಸುತ್ತಿದ್ದು, ದೇಶದಲ್ಲಿಯೇ ಪ್ರಮುಖ ಗ್ರೀನ್ ಮ್ಯಾರಥಾನ್ ಎಂದು ಗುರುತಿಸಿಕೊಂಡಿದೆ ಎಂದರು.
ವಿಜಯಪುರ ವಿಮಾನ ನಿಲ್ದಾಣವು ೨೦೨೪ರ ಅಂತ್ಯಕ್ಕೆ ಭೌತಿಕವಾಗಿ ಪೂರ್ಣಗೊಂಡಿದ್ದು, ಸರ್ವೋಚ್ಚ ನ್ಯಾಯಾಲಯದ ತಡೆಯಾಜ್ಞೆಯೂ ತೆರುವಾಗಿದೆ. ದಿನಾಂಕ: ೦೭-೧೦-೨೦೨೬ ರಂದು ಪರಿಸರ ಇಲಾಖೆಗೆ ಎನ್ ಒಸಿ ಹಾಗೂ ಡಿಜಿಸಿಎ ವತಿಯಿಂದ ಲೈಸೆನ್ಸ್ ಪಡೆದುಕೊಳ್ಳಲು ಪ್ರಗತಿ ಪೋರ್ಟಲ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಪ್ರಯಾಣ ಆರಂಭಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದುಶೇಖರ ಮಣೂರ ಸೇರಿದಂತೆ ಹಿರಿಯ ಪತ್ರಕರ್ತರಿಗೆ ಸನ್ಮಾನ

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಜಿಲ್ಲೆಯ ಸಾಧಕರನ್ನು ಸನ್ಮಾನಿಸಲಾಯಿತು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ’ಉದಯರಶ್ಮಿ’ ಪತ್ರಿಕೆ ಸಂಪಾದಕ ಇಂದುಶೇಖರ ಸಿದ್ದಣ್ಣ ಮಣೂರ, ’ಕನ್ನಡಪ್ರಭ’ ದ ಖಾಜಪ್ಪ ಬಸಪ್ಪ ಶಿಂಗಗೋಳ, ’ರಿಪಬ್ಲಿಕ್ ಕನ್ನಡ ’ ವಾಹಿನಿಯ ಸುನೀಲ ಗೋಡೆನವರ, ಹಿರಿಯ ಪತ್ರಕರ್ತ ಗುಂಡಪ್ಪ ಚಂದ್ರಪ್ಪ ಮುತ್ತಲದಿನ್ನಿ ಹಾಗೂ ’ಸಂಯುಕ್ತ ಕರ್ನಾಟಕ ’ ಪತ್ರಿಕೆಯ ನವೀದ್ ಅಂಜುಮ್ ಮಮದಾಪುರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ

ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ
    In (ರಾಜ್ಯ ) ಜಿಲ್ಲೆ
  • ೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಅನೇಕರ ಹೋರಾಟ ಮತ್ತು ತ್ಯಾಗದಿಂದ ಏಕೀಕರಣ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ :ಶಾಸಕ ಕಟಕದೊಂಡ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕಲಾವಿದ ಶ್ರೀಶೈಲ ಹೂಗಾರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.