Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ

ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ

ದೇವರಹಿಪ್ಪರಗಿ: ವಿವಿಧೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯೋತ್ಸವದ ಸಂಭ್ರಮಕ್ಕೆ ಚಿಣ್ಣರ ಸಾಂಸ್ಕೃತಿಕ ವೈಭವದ ಮೆರುಗು
(ರಾಜ್ಯ ) ಜಿಲ್ಲೆ

ರಾಜ್ಯೋತ್ಸವದ ಸಂಭ್ರಮಕ್ಕೆ ಚಿಣ್ಣರ ಸಾಂಸ್ಕೃತಿಕ ವೈಭವದ ಮೆರುಗು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡ ಗೀತೆಗಳಿಗೆ ಹೆಜ್ಜೆ ಹಾಕಿ, ಗಾಯನದ ಮೂಲಕ ನಾಡು-ನುಡಿಯ ಕಂಪು ಪಸರಿಸಿದ ವಿದ್ಯಾರ್ಥಿಗಳು | ಚಿಣ್ಣರ ನೃತ್ಯ, ಗಾಯನಕ್ಕೆ ಪ್ರೇಕ್ಷಕರ ಮೆಚ್ಚುಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ನಾಡಿನ ಇತಿಹಾಸ, ಪರಂಪರೆ, ಭಾಷೆ ಹಾಗೂ ಸಂಸ್ಕೃತಿಯ ವೈಭವವನ್ನು ಸ್ಮರಿಸುವ ಕರ್ನಾಟಕ ರಾಜ್ಯೋತ್ಸವದ ಸಂಭ್ರಮಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ವಿಶೇಷ ಮೆರುಗು ನೀಡಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡದ ಗೀತೆಗಳಿಗೆ ಲಯಬದ್ಧವಾಗಿ ಹೆಜ್ಜೆ ಹಾಕಿ, ಸುಮಧುರ ಕಂಠದಿಂದ ಹಾಡುಗಳನ್ನು ಪ್ರಸ್ತುತಪಡಿಸುವ ಮೂಲಕ ಕನ್ನಡಾಭಿಮಾನದ ಅನಾವರಣ ಮಾಡಿದರು. ಚಿಣ್ಣರ ನೃತ್ಯ, ಗಾಯನ ಹಾಗೂ ಮನಮೋಹಕ ಪ್ರದರ್ಶನದಿಂದ ಇಡೀ ಸಭಾಂಗಣ ಕನ್ನಡಮಯವಾಗಿ ಕಂಗೊಳಿಸಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ಕೇವಲ ಸಂಭ್ರಮಾಚರಣೆಯ ದಿನವಲ್ಲ; ಕನ್ನಡಿಗರ ಸ್ವಾಭಿಮಾನ, ಭಾಷಾ ಪ್ರೇಮ, ನಾಡಿನ ಏಕೀಕರಣದ ಹೋರಾಟ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಮೂಲಕ ಕನ್ನಡದ ಹಾಡು, ನೃತ್ಯ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳನ್ನು ಆಯೋಜಿಸಿರುವುದು ಮಕ್ಕಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅಭಿಮಾನ ಬೆಳೆಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿತ್ತು.
ವಿಜಯಪುರ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ನಾಡಿನ ಹಿರಿಮೆ, ಪ್ರಕೃತಿಯ ಸೌಂದರ್ಯ, ಕನ್ನಡಿಗರ ಬದುಕು, ನಾಡಿನ ಪರಂಪರೆ ಹಾಗೂ ದೇಶಪ್ರೇಮವನ್ನು ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.
‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’, ‘ಅಡವಿ ದೇವಿಯ ಕಾಡು ಜನಗಳ ಈ ನಾಡು’, ‘ಕನ್ನಡ ನಾಡು ಚಂದ ಕನ್ನಡದ ಮಾತು ಚಂದ’, ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ‘ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ’ ಗೀತೆಗಳಿಗೆ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಮತ್ತು ಗಾಯನ ಪ್ರಸ್ತುತಪಡಿಸಿ ಸಭಿಕರ ಗಮನ ಸೆಳೆದರು.


ಪುಟಾಣಿ ಮಕ್ಕಳ ಉತ್ಸಾಹ, ಕಲಾತ್ಮಕ ಅಭಿವ್ಯಕ್ತಿ ಹಾಗೂ ಕನ್ನಡದ ಮೇಲಿನ ಅಭಿಮಾನಕ್ಕೆ ಸಭಾಂಗಣ ಚಪ್ಪಾಳೆಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿತು.
ರಾಜ್ಯೋತ್ಸವದಂತಹ ಮಹತ್ವದ ಆಚರಣೆಗಳಲ್ಲಿ ಮಕ್ಕಳನ್ನು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಗೀತ ಮತ್ತು ಜನಪದ ಪರಂಪರೆಯ ಪರಿಚಯ ಬಾಲ್ಯದಿಂದಲೇ ಮೂಡಲು ಸಾಧ್ಯವಾಗುತ್ತದೆ. ಕನ್ನಡ ನಾಡಿನ ಇತಿಹಾಸ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಇಂತಹ ಕಾರ್ಯಕ್ರಮಗಳು ಕನ್ನಡದ ಉಳಿವು, ಬೆಳವಣಿಗೆ ಹಾಗೂ ಭಾಷಾಭಿಮಾನವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪ್ರದರ್ಶನ ನೀಡಿದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ಅಮರೇಶ ದೊಡಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ಶರಣು ಬಾಗೇವಾಡಿ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ

ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ

ದೇವರಹಿಪ್ಪರಗಿ: ವಿವಿಧೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಹಿರೇಮಸಳಿ ಬಂದ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ವಿವಿಧೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಹಿರೇಮಸಳಿ ಬಂದ್
    In (ರಾಜ್ಯ ) ಜಿಲ್ಲೆ
  • ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆ ಬಳಕೆಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ನ.೪ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಜ್ಯೋತ್ಸವದ ಸಂಭ್ರಮಕ್ಕೆ ಚಿಣ್ಣರ ಸಾಂಸ್ಕೃತಿಕ ವೈಭವದ ಮೆರುಗು
    In (ರಾಜ್ಯ ) ಜಿಲ್ಲೆ
  • ನಮ್ಮ ನಾಡಿನ ಪರಂಪರೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ
    In (ರಾಜ್ಯ ) ಜಿಲ್ಲೆ
  • ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.