ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶೇಷ ಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಎರಡು ಪ್ರತಿಗಳಲ್ಲಿ ನವೆಂಬರ್ ೭ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
